Sunday, June 7, 2026
Homeಕರಾವಳಿಉಡುಪಿ2025-26ನೇ ಸಾಲಿನ ಪ್ರತಿಷ್ಠಿತ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಪ್ರಕಟ

2025-26ನೇ ಸಾಲಿನ ಪ್ರತಿಷ್ಠಿತ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಪ್ರಕಟ

- Advertisement -
- Advertisement -

ಉಡುಪಿ: ಶಿಕ್ಷಕರ ದಿನಾಚರಣೆ ಅಂಗವಾಗಿ 2025-26ನೇ ಸಾಲಿನ ಪ್ರತಿಷ್ಠಿತ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದವರ ಹೆಸರಿನ ಪಟ್ಟಿಯನ್ನ ಉಡುಪಿ ಮಣಿಪಾಲದ ರಜತಾದ್ರಿಯ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯು ಪ್ರಕಟಿಸಿದೆ. ಈ ಪ್ರಶಸ್ತಿಯನ್ನ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗಗಳಲ್ಲಿ ನೀಡಲಾಗಿದೆ

ಕಿರಿಯ ಪ್ರಾಥಮಿಕ ವಿಭಾಗದಲ್ಲಿ: ಕುಂದಾಪುರದ ಮಾರೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಸರಸ್ವತಿ, ಉಡುಪಿಯ ಬೊಮ್ಮರಬೆಟ್ಟಿನ ಗುಡ್ಡೆಯಂಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವಸುಂಧರಾ,ಕಾರ್ಕಳದ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಹರೀಶ್ ಪೂಜಾರಿ ಎಸ್, ಬೈಂದೂರಿನ ಕಿಸ್ಮತ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಸುಮಂಗಲಾ ಗಾಣಿಗ, ಬ್ರಹ್ಮಾವರದ ಮೂಡುಕೆರೆ-ಅಚ್ಲಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವಿಜಯ ಎ ಅವರು ಆಯ್ಕೆಯಾಗಿದ್ದಾರೆ.

ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಕುಂದಾಪುರದ ಹೆಸ್ಕುತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶೇಖರ್ ಕುಮಾರ್, ಬ್ರಹ್ಮಾವರದ ಹಂಗಾರಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವೀಣಾ, ಉಡುಪಿಯ ನಂದಿಕೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರಮಣಿ, ಬೈಂದೂರಿನ ಕಂಚಿಕಾನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ತಿಮ್ಮಪ್ಪ ಗಾಣಿಗ, ಕಾರ್ಕಳದ ಕಡ್ಬೆಟ್ಟು-ಮಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಹೆಚ್ ಪ್ರಭಾವತಿ ಆಯ್ಕೆಯಾಗಿದ್ದಾರೆ.

ಪ್ರೌಢ ಶಾಲಾ ವಿಭಾಗದಲ್ಲಿ ಕಾರ್ಕಳದ ಬಜಗೋಳಿ ಪದವಿ ಪೂರ್ವ ಕಾಲೇಜಿನ (ಪ್ರೌಢ ಶಾಲಾ ವಿಭಾಗ) ಸಹ ಶಿಕ್ಷಕ ಶಶಿಶಂಕರ್ ಹೆಚ್ ಎಂ, ಉಡುಪಿಯ ಇನ್ನಂಜೆ ಹೆಚ್ ವಿ ಹೆಚ್ ಪದವಿ ಪೂರ್ವ ಕಾಲೇಜಿನ (ಪ್ರೌಢ ಶಾಲಾ ವಿಭಾಗ) ಕಲಾ ಶಿಕ್ಷಕ ಎನ್ ನಟರಾಜ್ ಉಪಾಧ್ಯಾಯ, ಬ್ರಹ್ಮಾವರದ ಕರ್ನಾಟಕ ಪಬ್ಲಿಕ್ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಗದೀಶ್ ಕೆ, ಕುಂದಾಪುರದ ಕಂಡ್ಲೂರು ರಾಮ್ಸನ್ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ಸಂತೋಷ್, ಬೈಂದೂರಿನ ಹೆಮ್ಮಾಡಿ ಜನತಾ ಪ್ರೌಢ ಶಾಲೆಯ ಸಹ ಶಿಕ್ಷಕ ಜಗದೀಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. 

- Advertisement -

Latest News

error: Content is protected !!