Friday, June 26, 2026
Homeಕರಾವಳಿಮಂಗಳೂರುಮಂಗಳೂರು; 26 ವರ್ಷಗಳ ಹಿಂದೆ ಕೋಮು ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪಿಗಳ ಬಂಧನ

ಮಂಗಳೂರು; 26 ವರ್ಷಗಳ ಹಿಂದೆ ಕೋಮು ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪಿಗಳ ಬಂಧನ

- Advertisement -
- Advertisement -

ಮಂಗಳೂರು; 26 ವರ್ಷಗಳ ಹಿಂದೆ ಕೋಮು ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಮುಲ್ಕಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಲೀಲಾಧರ್ ಮತ್ತು ಚಂದ್ರಹಾಸ್ ಕೇಶವ ಶೆಟ್ಟಿ ಬಂಧಿತರು.

ಪ್ರಕರಣದ ವಿವರ: ದಿನಾಂಕ 31-12-1998 ರಂದು ಮುಲ್ಕಿ ಠಾಣಾ ಸರಹದ್ದಿನ ಹಳೆಯಂಗಡಿಯಲ್ಲಿ ನಡೆದ ಕೋಮು ಗಲಭೆ, ಬೆಂಕಿ ಹಚ್ಚಿ ನಡೆಸಿದ ಗಲಾಟೆ ಹಿನ್ನೆಲೆಯಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ, ಆರೋಪಿಗಳ ಪೈಕಿ ಆರೋಪಿ ಲೀಲಾಧರ್ ಮತ್ತು ಚಂದ್ರಹಾಸ್ ಕೇಶವ ಶೆಟ್ಟಿ ರವರು ಘಟನೆ ನಡೆದಾಗಿನಿಂದ ಪೊಲೀಸರಿಗೆ ಸಿಗದೇ ಪರಾರಿಯಾಗಿದ್ದರಿಂದ ಹಿಂದಿನ ತನಿಖಾಧಿಕಾರಿಗಳು ಇವರ ವಿರುದ್ದ ತಲೆಮರೆಸಿಕೊಂಡದ್ದ ಬಗ್ಗೆ ಉಲ್ಲೇಖಿಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. 

ಈ ಇಬ್ಬರು ಆರೋಪಿಗಳು ತನಿಖಾಧಿಕಾರಿಯವರಿಗೆ ಸಿಗದೇ ನ್ಯಾಯಾಲಯ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡು ಪರಾರಿಯಾಗಿದ್ದ ಮೇರೆಗೆ ಮಾನ್ಯ ಹಿರಿಯ  CJ & JMFC ನ್ಯಾಯಾಲಯ ಮೂಡಬಿದ್ರಿರವರು     CC. No 665/2014, LPC No 10/2017 ಪ್ರಕರಣವೆಂದು ಘೋಷಿಸಿತ್ತು.

ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 𝟮𝟲 ವರ್ಷಗಳಿಂದ ತಲೆಮರೆಸಿಕೊಂಡಿರುವ LPC warrant ಆಸಾಮಿ ಲೀಲಾಧರ್ ಮುಲ್ಕಿಯ ಕೆಮ್ರಾಲ್  ಗ್ರಾಮಕ್ಕೆ ಇತ್ತೀಚೆಗೆ ಬಂದು ಪಕ್ಷಿಕೆರೆ ಗ್ರಾಮದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಾಗ ಮಾಹಿತಿ ಮೇರೆಗೆ ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ನೀಡಿರುತ್ತಾರೆ.

ಅದೇರೀತಿ ಇತ್ತೀಚೆಗೆ ಇದೇ ಪ್ರಕರಣದ ಇನ್ನೊಬ್ಬ ಆರೋಪಿ ಹಳೆಯಂಗಡಿ ನಿವಾಸಿ ಚಂದ್ರಹಾಸ್ ಕೇಶವ ಶೆಟ್ಟಿ  ಎಂಬಾತನನ್ನು ಸಹ ಮುಂಬಯಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನದಲ್ಲಿರುತ್ತಾರೆ.  ನ್ಯಾಯಾಲಯದಿಂದ ಹೊರಡಿಸಿದ್ದ ಉದ್ಘೋಷನೆ ಆದೇಶ ಉಲ್ಲಂಘಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದರಿಂದ ಇವರ ಇಬ್ಬರ ವಿರುದ್ದ ಪ್ರತ್ಯೇಕವಾಗಿ 88/2025 ಮತ್ತು 94/2025 ಕಲಂ 208, 209 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಿಸಿ ತನಿಖೆ ಕೈಕೊಳ್ಳಲಾಗಿದೆ.

- Advertisement -

Latest News

error: Content is protected !!