Thursday, June 4, 2026
Homeಕರಾವಳಿಮಂಗಳೂರುಮಂಗಳೂರು: ವಿಠಲ್ ಗೌಡ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ ಸ್ನೇಹಮಯಿ...

ಮಂಗಳೂರು: ವಿಠಲ್ ಗೌಡ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ ಸ್ನೇಹಮಯಿ ಕೃಷ್ಣ

- Advertisement -
- Advertisement -

ಮಂಗಳೂರು: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಠಲ್ ಗೌಡ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದು ವಿಠಲ್ ಗೌಡ ಎಂದು ಆರೋಪಿಸಿದ್ದಾರೆ. ಅಲ್ಲದೇ ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧಿಕ್ಷಕರಿಗೆ ಸ್ನೇಹಮಯಿ ಕೃಷ್ಣ ದಿನಾಂಕ 08-09-2025 ರಂದು ದೂರು ನೀಡಿದ್ದಾರೆ.

ಸದ್ಯ ದೂರು ಅರ್ಜಿಯನ್ನು ಧರ್ಮಸ್ಥಳ ಪೊಲೀಸ್ ಠಾಣೆಗೆ ಕಳುಹಿಸಲಾಗಿದೆ. ಇದರ ಬಗ್ಗೆ ಪರಿಶೀಲನೆಯ ನಂತರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

- Advertisement -

Latest News

error: Content is protected !!