- Advertisement -
![]()
- Advertisement -
ಮಂಗಳೂರು: ಅಪಾರ್ಟ್‌ಮೆಂಟ್‌ನ ಟೆರೇಸ್‌ನಿಂದ ಹಾರಿ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂದರು ಮುಖ್ಯಪ್ರಾಣ ದೇವಸ್ಥಾನ ಬಳಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ. ಅಪಾರ್ಟ್ ಮೆಂಟ್ ನಿವಾಸಿ ಖುಷಿ (14) ಮೃತಪಟ್ಟ ವಿದ್ಯಾರ್ಥಿನಿ.
ಖುಷಿ ಮುಂದಿನ ವಾರ ಪರೀಕ್ಷೆ ಇದ್ದುದರಿಂದ ರಾತ್ರಿ ಕೂಡಾ ಮನೆಯಲ್ಲಿ ಓದುತ್ತಿದ್ದಳು. ಜತೆಗೆ ಸ್ವಲ್ಪ ಖಿನ್ನತೆಯಿಂದಲೂ ಬಳಲುತ್ತಿದ್ದಳು.ಟೆರೇಸ್‌ನಿಂದ ಹಾರಿ ಗಂಭೀರ ಗಾಯಗೊಂಡಿದ್ದು ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಈ ಕುರಿತು ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


