- Advertisement -
![]()
- Advertisement -
ಬೆಳ್ತಂಗಡಿ; ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಂಧಿವಾತ ಮತ್ತು ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರವನ್ನು ನಡೆಸಲಾಯಿತು.
ಈ ಶಿಬಿರದಲ್ಲಿ ಖ್ಯಾತ ಸಂಧಿವಾತ ತಜ್ಞರಾದ ಡಾ| ಅಶ್ವಿನಿ ಕಾಮತ್ ಭಾಗವಹಿಸಿ ರೋಗಿಗಳ ತಪಾಸಣೆ ನಡೆಸಿದರು. ಸಂಧಿವಾತ, ಅಸ್ಥಿ ಸಂಧಿವಾತ, ಮಕ್ಕಳ ಸಂಧಿವಾತ, ರುಮಟಾಯ್ಡ್, ಆರ್ಥೈಟಿಸ್, ಸ್ಟಾಂಡಿಲೋ ಆರ್ಥೈಟಿಸ್, ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸಸ್, ಸೋರಿಯಾಸಿಸ್, ವಾಸ್ಕುಲೈಟಿಸ್ ಮುಂತಾದ ತೊಂದರೆಗಳಿಂದ ಬಳಲುತ್ತಿರುವವರು ಈ ಶಿಬಿರದಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಂಡರು. ಈ ಶಿಬಿರದಲ್ಲಿ ಉಚಿತ ಸಮಾಲೋಚನೆಯ ಜತೆಗೆ ರಕ್ತ ಪರೀಕ್ಷೆಗೆ ೨೦% ಹಾಗೂ ಔಷಧಗಳಿಗೆ ೧೦% ರಿಯಾಯಿತಿಯನ್ನು ನೀಡಲಾಯಿತು.
- Advertisement -


