Wednesday, June 3, 2026
Homeಕರಾವಳಿಉಡುಪಿದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ...

ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ…

- Advertisement -
- Advertisement -

ಮಂಗಳೂರುದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ಅವರನ್ನು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ, ನೂತನ ಜಿಲ್ಲಾಧಿಕಾರಿಯಾಗಿ ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಯಲ್ಲಿ 2013ರ ವೃಂದದ ಐಎಎಸ್‌ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರನ್ನು ನೇಮಿಸಿದೆ.

ಸಸಿಕಾಂತ್‌ ಸೆಂಥಿಲ್ ಅವರು ಐಎಎಸ್‌ ಅಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ 2019ರ ಸೆಪ್ಟೆಂಬರ್‌ ತಿಂಗಳಿನಲ್ಲಿ ಸಿಂಧೂ ಬಿ.ರೂಪೇಶ್‌ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹುದ್ದೆಗೆ ನೇಮಿಸಲಾಗಿತ್ತು. ಅವರನ್ನು ಈಗ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ನಾಗರಿಕ ಸೇವೆಗಳ ಎಲೆಕ್ಟ್ರಾನಿಕ್‌ ಡೆಲಿವರಿ ವಿಭಾಗದ ನಿರ್ದೇಶಕಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಡಾ.ರಾಜೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನವರು. ದಾವಣೆಗೆರೆಯ ಬಾಪೂಜಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಪದವಿ ಪಡೆದ ಬಳಿಕ ನಾಗರಿಕ ಸೇವಾ ಪರೀಕ್ಷೆ ಎದುರಿಸಿದ್ದರು. ಆರಂಭದಲ್ಲಿ ಭಾರತೀಯ ರೈಲ್ವೆ ವೈದ್ಯಕೀಯ ಸೇವೆ (ಐಆರ್‌ಎಂಎಸ್‌) ಅಧಿಕಾರಿಯಾಗಿದ್ದರು. 2013ರಲ್ಲಿ 32ನೇ ರ‍್ಯಾಂಕ್‌ನೊಂದಿಗೆ ಐಎಎಸ್‌ ಅಧಿಕಾರಿಯಾಗಿ ಆಯ್ಕೆಯಾಗಿದ್ದರು.

ಪ್ರೊಬೇಷನರಿ ಅವಧಿಯನ್ನು ಬೀದರ್‌ ಜಿಲ್ಲೆಯಲ್ಲಿ ಪೂರ್ಣಗೊಳಿಸಿದ್ದ ರಾಜೇಂದ್ರ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪ ವಿಭಾಗಾಧಿಕಾರಿ ಹುದ್ದೆಗೆ 2015ರಲ್ಲಿ ನಿಯುಕ್ತಿಗೊಂಡಿದ್ದರು. ಆ ಬಳಿಕ ಬಳ್ಳಾರಿ ಮತ್ತು ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.

 

- Advertisement -

Latest News

error: Content is protected !!