Friday, June 5, 2026
Homeತಾಜಾ ಸುದ್ದಿಸಾಹಸಸಿಂಹ ಡಾ. ವಿಷ್ಣುವರ್ಧನ್ ಹಾಗೂ ನಟಿ ಬಿ. ಸರೋಜಾದೇವಿ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ

ಸಾಹಸಸಿಂಹ ಡಾ. ವಿಷ್ಣುವರ್ಧನ್ ಹಾಗೂ ನಟಿ ಬಿ. ಸರೋಜಾದೇವಿ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ

- Advertisement -
- Advertisement -

ಬೆಂಗಳೂರು; ಸಾಹಸಸಿಂಹ ಡಾ. ವಿಷ್ಣುವರ್ಧನ್ ಹಾಗೂ ನಟಿ ಬಿ. ಸರೋಜಾದೇವಿ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ ಮಾಡಲಾಗಿದೆ.

ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ನೀಡಬೇಕು ಎಂಬುದು ವಿಷ್ಣು ದಾದಾ ಕುಟುಂಬದವರ ಮತ್ತು ಅಭಿಮಾನಿಗಳ ಮನವಿ ಆಗಿತ್ತು. ಇಂದು (ಸೆಪ್ಟೆಂಬರ್ 11) ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಲಾಗಿದೆ.

ಭಾರತಿ ವಿಷ್ಣುವರ್ಧನ್, ಅನಿರುದ್ಧ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಅಲ್ಲದೇ, ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲಾ, ಶ್ರುತಿ, ಮಾಳವಿಕಾ ಅವಿನಾಶ್ ಅವರು ಕೂಡ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ವಿಷ್ಣುವರ್ಧನ್ ಮತ್ತು ಬಿ. ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದರು.

- Advertisement -

Latest News

error: Content is protected !!