- Advertisement -
![]()
- Advertisement -
ಉಡುಪಿ: ಡ್ರಗ್ ಡಿಸ್ಪೋಸಲ್ ಕಮಿಟಿ ಸಮಕ್ಷಮದಲ್ಲಿ ಜಿಲ್ಲೆಯ ಅಬಕಾರಿ ಇಲಾಖೆ ವತಿಯಿಂದ ಪಡುಬಿದ್ರಿಯ ನಂದಿಕೂರು ಕೈಗಾರಿಕಾ ಪ್ರದೇಶದ ಮೆ.ಆಯುಷ್ ಎನ್ವಿರೋಟಿಕ ಪ್ರೈ.ಲಿ ಜೀವ ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ 9 ಪ್ರಕರಣಗಳಲ್ಲಿ ಜಪ್ತಿ ಮಾಡಿದ 2.794 ಕೆ.ಜಿ ಗಾಂಜಾವನ್ನು ಇಂದು ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ನಾಶಪಡಿಸಲಾಯಿತು.
ಈ ಸಂದರ್ಭದಲ್ಲಿ ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಾಲಕೃಷ್ಣ ಸಿ.ಹೆಚ್, ಉಡುಪಿಯ ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ಪಿ, ಮಂಗಳೂರು ಅಬಕಾರಿ ಉಪ ಆಯುಕ್ತ ಟಿ.ಎಂ.ಶ್ರೀನಿವಾಸ್, ಉಡುಪಿ ಕಚೇರಿಯ ಅಬಕಾರಿ ಅಧೀಕ್ಷಕ ಅಶೋಕ್ ಹೆಚ್, ಮೆ.ಆಯುಷ್ ಎನ್ವಿರೋಟಿಕ ಪ್ರೈ.ಲಿನ ಮಾರ್ಕೆಟಿಂಗ್ ಮ್ಯಾನೆಜರ್ ಸತೀಶ್ ನಾಯಕ್, ಇಲಾಖಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
- Advertisement -


