- Advertisement -
![]()
- Advertisement -
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 173 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಸೋಂಕಿತರ ಸಂಖ್ಯೆ 5098ಕ್ಕೆ ಏರಿಕೆಯಾಗಿದೆ. ಇನ್ನು ಇಂದು ಮೂವರು ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 116ಕ್ಕೆ ಏರಿಕೆಯಾಗಿದೆ.
ಇನ್ನು ಜಿಲ್ಲೆಯಲ್ಲಿ ಸದ್ಯ 2642 ಸಕ್ರೀಯ ಪ್ರಕರಣಗಳಿದ್ದು, 2338 ಮಂದಿ ಇದುವರೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಒಂದೇ ದಿನ 200 ಮಂದಿ ಗುಣಮುಖರಾಗಿದ್ದಾರೆ.
ಇನ್ನು ಉಡುಪಿಯಲ್ಲಿ ಇಂದು 109 ಹೊಸ ಪ್ರಕರಣಗಳು ಪತ್ತೆಯಾಗಿದೆ. ಹಾಗೇ ಇವತ್ತು 7 ಮಂದಿ ಕೊರೊನಾದಿಂದಾಗಿ ಉಡುಪಿಯಲ್ಲಿ ಸಾವನ್ನಪ್ಪಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3721ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1,472 ಸಕ್ರೀಯ ಪ್ರಕರಣಗಳಿದ್ದು, 2228 ಮಂದಿ ಇದುವರೆಗೂ ಗುಣಮುಖರಾಗಿದ್ದಾರೆ. ಅಲ್ಲದೇ ಉಡುಪಿಯಲ್ಲಿ 21 ಕೊರೊನಾದಿಂದಾಗಿ ಇದುವರೆಗೂ ಸಾವನ್ನಪ್ಪಿದ್ದಾರೆ.
- Advertisement -


