- Advertisement -
![]()
- Advertisement -
ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್.21ರವರೆಗೂ ಧಾರಾಕಾರ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
- Advertisement -


