- Advertisement -
![]()
- Advertisement -
ಸುಳ್ಯ: ಬೆಳ್ಳಾರೆ ಬಳಿಯ ಅಯ್ಯನಕಟ್ಟೆಯಲ್ಲಿ ವ್ಯಕ್ತಿಯೋರ್ವ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ವಿದ್ಯುತ್ ಲೈನಿಗೆ ಅಲ್ಯೂಮೀನಿಯಂ ತಗುಲಿ ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಸಂಭವಿಸಿದೆ.
ತಂಬಿನಮಕ್ಕಿಯ ರಾಮ ಮೃತರಾದ ವ್ಯಕ್ತಿ ಎಂದು ಗುರುತಿಸಲಾಗಿದೆ..
ಅಯ್ಯನಕಟ್ಟೆಯ ಗೋಕುಲಂ ಎದುರುಗಡೆ ಇರುವ ಸಿದ್ದಿಕ್ ಎಂಬರಿಗೆ ಸೇರಿದ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಘಟನೆಯ ಬಗ್ಗೆ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
- Advertisement -


