Thursday, June 4, 2026
Homeಕರಾವಳಿಮಂಗಳೂರುವಿಟ್ಲ ; ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರ ಬಂಧನ

ವಿಟ್ಲ ; ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರ ಬಂಧನ

- Advertisement -
- Advertisement -

ವಿಟ್ಲ ; ಅಕ್ರಮವಾಗಿ ಗಾಂಜಾ  ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲ ಕಸಬಾ ಗ್ರಾಮದ ಮಂಗಳಪದವು ನಿವಾಸಿ ಸನತ್‌ ಕುಮಾರ್‌ (23), ವಿಟ್ಲ ಕಸಬಾ ಗ್ರಾಮದ ನಿವಾಸಿ ಮಹಮ್ಮದ್‌ ರಾಝಿಕ್‌ (23), ವಿಟ್ಲ ಕಸಬಾ ಗ್ರಾಮದ ಮಂಗಳಪದವು ನಿವಾಸಿ ಚೇತನ್‌ (23), ಎರ್ಮೆ ಮಜಲು ನಿವಾಸಿ ಧ್ಯಾನ್ ಕರ್ಕೆರ(23) ಬಂಧಿತರು.

ವಿಟ್ಲ ಪೊಲೀಸ್ ಠಾಣಾ  ಪೊಲೀಸ್ ಉಪನಿರೀಕ್ಷಕರಾದ ರಾಮಕೃಷ್ಣ ರವರು ಸಿಬ್ಬಂದಿಯೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿರುವಾಗ ಬಾತ್ಮಿದಾರರಿಂದ ಬಂದ ಖಚಿತ ಮಾಹಿತಿಯಂತೆ,  ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಎರುಂಬು ರಸ್ತೆ ಎಂಬಲ್ಲಿ, ದ್ವಿಚಕ್ರ  ವಾಹನದೊಂದಿಗೆ ಅನುಮಾಸ್ಪದವಾಗಿ ಮತ್ತು ಸಂಶಯಾಸ್ಪದವಾಗಿ ನಿಂತುಕೊಂಡಿದ್ದ ಮೂವರನ್ನು ವಿಚಾರಿಸಿದಾಗ ಅವರುಗಳು  ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು  ಬೈಕ್ ನಲ್ಲಿ  ಅಕ್ರಮವಾಗಿ ಸ್ವಾಧೀನದಲ್ಲಿಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದು, ಗೊತ್ತಾಗಿದೆ ಅದರಂತೆ ಅವರನ್ನು ಬಂಧಿಸಿದ್ದು ಬಂಧಿತರಿಂದ 6.27 ಗ್ರಾಂ ತೂಕದ ಗಾಂಜಾ, ಮೊಬೈಲ್ ಗಳು-3, ಸಣ್ಣ ಚೂರಿ-1, ಒಂದು ಬೈಕ್ ಅನ್ನು  ವಶಪಡಿಸಿಕೊಂಡಿದ್ದಾರೆ.

- Advertisement -

Latest News

error: Content is protected !!