Tuesday, June 9, 2026
Homeತಾಜಾ ಸುದ್ದಿರಾಜ್ಯದಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ; ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 9 ಜಿಲ್ಲೆಗಳಿಗೆ ಅಲರ್ಟ್‌...

ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ; ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 9 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ

- Advertisement -
- Advertisement -

ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 9 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ, ಧಾರವಾಡ, ಬೀದರ್‌, ಕಲಬುರ್ಗಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

- Advertisement -

Latest News

error: Content is protected !!