Friday, June 5, 2026
Homeಕರಾವಳಿಮಂಗಳೂರುಗೂಡಂಗಡಿಯ ಮಾಲೀಕನಿಂದ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಗೂಡಂಗಡಿಯ ಮಾಲೀಕನಿಂದ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ ಗೂಡಂಗಡಿಯ ಮಾಲೀಕನೊಬ್ಬ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಂದಾರು ನಿವಾಸಿ ಇಬ್ರಾಹಿಂ ಯಾನೆ ಪುತ್ತುಮೋನು(55) ಎಂಬಾತನು‌ ಕಳೆದ ಕೆಲದಿನಗಳಿಂದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎನ್ನಲಾಗಿದ್ದು ಇದೀಗ ಈಬಗ್ಗೆ ದೌರ್ಜನ್ಯಕ್ಕೆ ಈಡಾದವರ ಮನೆಯವರು ದೂರು ನೀಡಿದ್ದು. ಧರ್ಮಸ್ಥಳ ಠಾಣೆಯಲ್ಲಿ ಸೆ.18 ರಂದು ಪೋಕ್ಸೋ ಪ್ರಕರಣ ದಾಖಲಾಗಿದೆ.

ಅಪ್ರಾಪ್ತ ಬಾಲಕನನ್ನು ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿದ ಆರೋಪಿ ಇಬ್ರಾಹಿಂ ಅಲಿಯಾಸ್ ಪುತ್ತು ಮೋನು(55) ಎಂಬಾತನಾಗಿದ್ದು ಈತನ ವಿರುದ್ಧ ಪೋಕ್ಸೋ ಪ್ರಕರಣ‌ ದಾಖಲಿಸಲಾಗಿದ್ದು ಆರೋಪಿಯನ್ನು ಸೆ.19ರಂದು ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ದೌರ್ಜನ್ಯದ ವೀಡಿಯೋವನ್ನು ಚಿತ್ರೀಕರಿಸಿದ ವ್ಯಕ್ತಿಯೊಬ್ಬ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾನೆ ಎನ್ನಲಾಗಿದ್ದು ಈ ಬಗ್ಗೆ ಆತನ ವಿರುದ್ದವೂ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿರುವುದಾಗಿ ತಿಳಿದುಬಂದಿದೆ.

- Advertisement -

Latest News

error: Content is protected !!