Saturday, June 6, 2026
Homeಕರಾವಳಿಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ಸರ್ಕಾರ ನಿರ್ಧಾರ

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ಸರ್ಕಾರ ನಿರ್ಧಾರ

- Advertisement -
- Advertisement -

ರಾಜ್ಯ ಸರ್ಕಾರವು ಕಂಬಳ ಪ್ರಿಯರಿಗೆ ಸಿಹಿ ಸುದ್ದಿ ನೀಡಿದ್ದು, ಕರಾವಳಿಯ ಜಾನಪದ ಕ್ರೀಡೆಯಾಗಿರುವ ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಲಾಗಿದದೆ.

ರಾಜ್ಯ ಸರ್ಕಾರದಿಂದ ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ ಘೋಷಣೆಯಾದರೆ ರಾಜ್ಯದ ಕ್ರೀಡಾ ಪ್ರಾಧಿಕಾರದಿಂದ ಉಳಿದ ಕ್ರೀಡೆಗಳಿಗೆ ಸಿಗುವ ಸೌಲಭ್ಯಗಳು ಕೂಡ ಕಂಬಳ ಕ್ರೀಡೆಗಳಿಗೂ ಸಿಗಲಿವೆ. ರಾಜ್ಯ ಕ್ರೀಡೆಯ ಮಾನ್ಯತೆ ಅಂತಿಮ ಹಂತದಲ್ಲಿದ್ದು, ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ.

ಕಂಬಳ ಅಸೋಸಿಯೇಷನ್ ನೇಮಕ ಪಟ್ಟಿಯನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ. ಸಮಿತಿಯ ಅಧ್ಯಕ್ಷರೇ ಕಂಬಳ ಅಸೋಸಿಯೇಷನ್ ಗೆ ಅಧ್ಯಕ್ಷರಾಗಿದ್ದಾರೆ. ಕಂಬಳ ಕೋಣದ ಮಾಲೀಕರು, ಓಟಗಾರರು ಇತರರಿಗೆ, ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಧನ, ವಿಶೇಷ ಅನುದಾನ ಸೌಲಭ್ಯ ಸಿಗಲಿವೆ.

- Advertisement -

Latest News

error: Content is protected !!