- Advertisement -
![]()
- Advertisement -
ಉಡುಪಿ: ಸುಳ್ಳು ಆರೋಪಗಳಿಂದ ಮನನೊಂದು ವಿಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಟಪಾಡಿ ಸಮೀಪದ ಸುಭಾಷ್ ನಗರ ಎಂಬಲ್ಲಿ ಭಾನುವಾರ ರಾತ್ರಿ ವೇಳೆ ನಡೆದಿದೆ. ಸುಭಾಷ್ ನಗರ ನಿವಾಸಿ ಶೇಕ್ ಅಬ್ದುಲ್ಲಾ(38) ಮೃತ ದುರ್ದೈವಿ.
ತನ್ನ ಸಾವಿಗೆ ಕಾರಣ ಮಿಸಾಲ್, ಮಿಸಾಲ್ ನ ತಾಯಿ ಮತ್ತು ತಂಗಿ ಎಂಬುದಾಗಿ ಶೇಕ್ ಅಬ್ದುಲ್ಲಾ ವಿಡಿಯೋದಲ್ಲಿ ಆರೋಪಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ತನ್ನ ತಮ್ಮನ ಸಾವಿಗೆ ಈ ಮೂವರು ಮಾಡಿರುವ ಸುಳ್ಳು ಆರೋಪವೇ ಕಾರಣ ಎಂಬುದಾಗಿ ಮೃತರ ಸಹೋದರ ನೀಡಿದ ದೂರಿನಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


