- Advertisement -
![]()
- Advertisement -
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್‌ನಿಂದ ಕೈಬಿಡುವಂತೆ ಬೆಂಗಳೂರಿನ ಸಿಟಿ ಸಿವಿಲ್ 57ನೇ ಕೋರ್ಟ್‌ಗೆ ನಟ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಬಗ್ಗೆ ಕೋರ್ಟ್ ಶೀಘ್ರದಲ್ಲೇ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಇನ್ನು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಗೆ ಸೆಷನ್ಸ್ ನ್ಯಾಯಾಲಯ ಇಂದು ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗದಿಪಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್, ಪವಿತ್ರಾಗೌಡ ಸೇರಿದಂತೆ 17 ಮಂದಿ ಆರೋಪಿಗಳು ಇಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸೂಚನೆ ನೀಡಿತ್ತು.
ಇನ್ನು ಜೈಲಿನಲ್ಲಿ ಹಾಸಿಗೆ, ದಿಂಬು ನೀಡಬೇಕಾದ ಆದೇಶ ಪಾಲಿಸುತ್ತಿಲ್ಲ ಎಂದು ದರ್ಶನ್ ಸಲ್ಲಿಸಿದ್ದ ಅರ್ಜಿ ಕುರಿತ ಆದೇಶವನ್ನು ನ್ಯಾಯಾಲಯ ಪ್ರಕಟಿಸಲಿದೆ.
- Advertisement -


