Monday, June 8, 2026
Homeಕರಾವಳಿಯುಟಿ ಖಾದರ್ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಯುಟಿ ಖಾದರ್ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

- Advertisement -
- Advertisement -

ಮಂಗಳೂರು: ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರಿಗೆ ಧೈರ್ಯ ತುಂಬುವ ಬದಲು ಬಿಜೆಪಿ ಮುಖಂಡರು ರಾಜಕೀಯ ಮೇಲಾಟ ಮಾಡುತ್ತಿದ್ದಾರೆ. ಮಾರಕ ಕೊರೋನಾ ಜನರನ್ನು ಉಸಿರುಗಟ್ಟಿಸುತ್ತಿದೆ. ಬಿಜೆಪಿ ಜನಪ್ರತಿನಿಧಿಗಳು ಅಧಿಕಾರಿಗಳ ಉಸಿರುಗಟ್ಟಿಸುತ್ತಿದ್ದಾರೆ ಎಂದು ಮಾಜಿ ಸಚಿವ ಯುಟಿ ಖಾದರ್ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಮ್ಮದೇ ಶೈಲಿಯಲ್ಲಿ ಉತ್ತರ ನೀಡಿದ್ದಾರೆ.

ಆಡಳಿತಾತ್ಮಕ ದೃಷ್ಟಿಯಿಂದ ಸರಕಾರ ಮಾಡಿದ ವರ್ಗಾವಣೆಯನ್ನು ಖಾದರ್ ರಾಜಕೀಯಗೊಳಿಸಿದ್ದು ದುರದೃಷ್ಟ. ಯಾವುದೇ ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ.

Posted by Kota Shrinivas Poojari on Tuesday, 28 July 2020

ಆಡಳಿತಾತ್ಮಕ ದೃಷ್ಟಿಯಿಂದ ಸಿಂಧು ಬಿ ರೂಪೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಸರಕಾರ ಮಾಡಿದ ವರ್ಗಾವಣೆಯನ್ನು ಖಾದರ್ ರಾಜಕೀಯಗೊಳಿಸಿದ್ದು ದುರದೃಷ್ಟಕರ ಎಂದಿದ್ದಾರೆ.

ಹಾಗೆಯೆ ಯುಟಿ ಖಾದರ್ ಈ ಹಿಂದೆ ಸಚಿವರಾಗಿದ್ದಾಗ ಜಿಲ್ಲೆಯನ್ನು ಗೂಂಡಾ ಚಟುವಟಿಕೆಗಳು ಯಥೇಚ್ಛವಾಗಿ ನಡೆಯುತ್ತಿತ್ತು. ಹಾಗೆಯೇ ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ಎಂದು ಖಾದರ್ ಅವರಿಗೆ ನೆನಪು ಮಾಡಿಸುತ್ತೇನೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ

- Advertisement -

Latest News

error: Content is protected !!