- Advertisement -
![]()
- Advertisement -
ಬೆಂಗಳೂರು: ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ಸರ್ಕಾರಿ ನೇಮಕಾತಿಯಲ್ಲಿನ ವಯೋಮಿತಿ ಸಡಿಲಿಕೆಗೆ ಚಿಂತನೆ ನಡೆಸಿದೆ ಎನ್ನಲಾಗಿದೆ.
ಪೊಲೀಸ್ ಕಾನ್ ಸ್ಟೇಬಲ್ ಮತ್ತು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ವಯೋಮಿತಿ ಸಡಿಲಿಕೆಗೆ ಸರ್ಕಾರದ ಮಟ್ಟದಲ್ಲಿ ಪ್ರಸ್ತಾವನೆ ಸಿದ್ದಪಡಿಸಲಾಗಿದೆ ಎಂದು ಹೇಳಲಾಗಿದೆ.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಯೋಮಿತಿ ಸಡಿಲಕೆ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.
ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗೆ ಪ್ರಸ್ತುತ ಎಸ್ ಸಿ, ಎಸ್ ಟಿ ಮತ್ತು ಹಿಂದುಳಿದ ವರ್ಗಕ್ಕೆ ಗರಿಷ್ಠ ವಯೋಮಿತಿ 27 ವರ್ಷ ಆಗಿದ್ದು, ಇತರೆ ಅಭ್ಯರ್ಥಿಗಳಿಗೆ 25 ವರ್ಷ ಆಗಿದೆ.
ಪಿಎಸ್ಐ ಹುದ್ದೆಗೆ ಎಸ್ ಸಿ, ಎಸ್ಟಿ ಮತ್ತು ಹಿಂದುಳಿದ ವರ್ಗಕ್ಕೆ ಗರಿಷ್ಠ ವಯೋಮಿತಿ 30 ವರ್ಷ ಆಗಿದ್ದು, ಇತರೆ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 28 ವರ್ಷ ನಿಗದಿ ಪಡಿಸಲ್ಪಟ್ಟಿದೆ.
- Advertisement -


