Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ : ತಿಮರೋಡಿ ಗಡಿಪಾರು ಆದೇಶ ಪ್ರಕರಣ; ಗಡಿಪಾರು ವಿರುದ್ಧ ಪ್ರತಿಭಟನೆಗೆ ಅನುಮತಿ ನಿರಾಕರಣೆ

ಬೆಳ್ತಂಗಡಿ : ತಿಮರೋಡಿ ಗಡಿಪಾರು ಆದೇಶ ಪ್ರಕರಣ; ಗಡಿಪಾರು ವಿರುದ್ಧ ಪ್ರತಿಭಟನೆಗೆ ಅನುಮತಿ ನಿರಾಕರಣೆ

- Advertisement -
- Advertisement -

ಬೆಳ್ತಂಗಡಿ : ತಿಮರೋಡಿ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಆದೇಶ ಮಾಡಿರುವ ವಿರುದ್ಧ ತಿಮರೋಡಿ ಬೆಂಬಲಿಗರಿಂದ ಪ್ರತಿಭಟನೆಗೆ ಅನುಮತಿಯನ್ನು ಬೆಳ್ತಂಗಡಿ ತಹಶೀಲ್ದಾರ್ ನಿರಾಕರಿಸಿ ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಒಂದು ವರ್ಷ ಗಡಿಪಾರು ಮಾಡಿ ಸೆ.18 ರಂದು ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಆದೇಶ ಹೊರಡಿಸಿದ್ದರು.

ಈ ಗಡಿಪಾರು ಆದೇಶದ ವಿರುದ್ಧ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಸೆ.25 ರಂದು ಬೆಳ್ತಂಗಡಿ ತಹಶೀಲ್ದಾರ್ ಗೆ ಸೆ.29 ರಂದು ಬೆಳ್ತಂಗಡಿ ಆಡಳಿತ ಸೌಧದ ಮುಂದೆ ಪ್ರತಿಭಟನೆ ನಡೆಸಲು ಅನುಮತಿ ಪಡೆಯಲು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಬೆಳ್ತಂಗಡಿ ಪೊಲೀಸರು  ಪ್ರತಿಭಟನೆ ಅರ್ಜಿ ಪರಿಶೀಲನೆ ಮಾಡಿ ಸಾರ್ವಜನಿಕ ಶಾಂತಿಗೆ ಭಂಗವನ್ನುಂಟು ಮಾಡಿ ಕಾನೂನು ಮತ್ತು ಸುವ್ಯವಸ್ಥೆ ಆಗುವ ಸಂಭವ ಇರುವುದಾಗಿ ತಿಳಿಸಿ ಅನುಮತಿ ನೀಡದಂತೆ ಅಭಿಪ್ರಾಯ ನೀಡಿದ ಮೇರೆಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಸೆ.26 ರಂದು ಪ್ರತಿಭಟನೆಗೆ ಅನುಮತಿ ನಿರಾಕರಿಸಿ ಹಿಂಬರಹ ನೀಡಿದ್ದಾರೆ.

- Advertisement -

Latest News

error: Content is protected !!