Saturday, June 6, 2026
HomeWorld60,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ

60,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ

- Advertisement -
- Advertisement -

60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಒಡಿಶಾದ ಜಾರ್ಸುಗುಡದಲ್ಲಿ ಚಾಲನೆ ನೀಡಿದ್ದಾರೆ.

ದೂರಸಂಪರ್ಕ, ರೈಲ್ವೆ, ಉನ್ನತ ಶಿಕ್ಷಣ, ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಗ್ರಾಮೀಣ ವಸತಿ ಕ್ಷೇತ್ರಗಳು ಸೇರಿದಂತೆ ಇತರ ಕ್ಷೇತ್ರಗಳಿಗೆ ಸಂಬಧಿಸಿದ ಅಭಿವೃದ್ಧಿ ಯೋಜನೆಗಳಿಗೆ ಈ ಮೊತ್ತವನ್ನು ಬಿಡುಗಡೆಗೊಳಿಸಿ ಶಂಕು ಸ್ಥಾಪನೆಯನ್ನ ನೆರವೇರಿಸಿದರು.

ಯೋಜನೆಗಳ ವಿವರಗಳು: ದೂರಸಂಪರ್ಕ, ರೈಲ್ವೆ, ಉನ್ನತ ಶಿಕ್ಷಣ, ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಗ್ರಾಮೀಣ ವಸತಿ ಕ್ಷೇತ್ರಗಳು ಸೇರಿದಂತೆ ಇತರ ಕ್ಷೇತ್ರಗಳಿಗೆ ಸಂಬಧಿಸಿದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿಗಳು ಉದ್ಘಾಟಿಸಿದ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಸ್ವದೇಶಿ ತಂತ್ರಜ್ಞಾನದೊಂದಿಗೆ ಸುಮಾರು 37,000 ಕೋಟಿ ರೂ. ವೆಚ್ಚದ 97,500 4ಜಿ ಮೊಬೈಲ್ ಟವರ್‌ಗಳನ್ನು ಉದ್ಘಾಟಿಸಿದ್ದು, ಇದರಲ್ಲಿ ಆಂಧ್ರಪ್ರದೇಶಕ್ಕೆ ಸೇರಿದ ಹೊಸ ಬಿಎಸ್‌ಎನ್‌ಎಲ್‌ನ ಟವರ್‌ಗಳು ಸಹ ಸೇರಿವೆ.

4ಜಿ ಸೈಟ್‌ಗಳಿಗೆ ಡಿಜಿಟಲ್ ಭಾರತ್ ನಿಧಿಯಡಿಯಲ್ಲಿ 18,900 ಕ್ಕೂ ಹೆಚ್ಚು ಹಣಕಾಸಿನ ನೆರವು ನೀಡಲಾಗಿದೆ. ಇದರಿಂದ ಸುಮಾರು 26,700 ಸಂಪರ್ಕವಿಲ್ಲದ ಹಳ್ಳಿಗಳಿಗೆ ಸಂಪರ್ಕ ಸಾಧಿಸಲು ಅನುಕೂಲವಾಗುತ್ತದೆ. ಇದರಿಂದಾಗಿ 20 ಲಕ್ಷಕ್ಕೂ ಹೆಚ್ಚು ಬಳಕೆದಾರರು ಉಪಯೋಗ ಪಡೆದುಕೊಳ್ಳಲಿದ್ದಾರೆ. ಈ ಟವರ್‌ಗಳು ಸೌರಶಕ್ತಿ ಚಾಲಿತವಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!