- Advertisement -
![]()
- Advertisement -
ನಟ, ಟಿವಿಕೆ ಪಕ್ಷದ ಅಧ್ಯಕ್ಷ ದಳಪತಿ ವಿಜಯ್ ಅವರ ಕರೂರಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಲ್ತುಳಿತವಾಗಿ 31 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಸಾವಿನ ಸದ್ಯಕ್ಕೆ ಏರಿಕೆಯಾಗುವ ಸಾಧ್ಯತೆಯಿದೆ.
ಮೃತಪಟ್ಟವರಲ್ಲಿ ಮೂವರು ಮಕ್ಕಳು ಕೂಡ ಸೇರಿದ್ದಾರೆ. ಆರಂಭದಲ್ಲಿ 10 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿತ್ತು. ಬಳಿಕ ಸಾವಿನ ಸಂಖ್ಯೆ ಹೆಚ್ಚಾಗಿದೆ. ಈಗಾಗಲೇ 50ಕ್ಕೂ ಹೆಚ್ಚು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
“ಇದುವರೆಗೆ ಕನಿಷ್ಠ 31 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಿರುಚಿಯಿಂದ 24 ವೈದ್ಯರು ಮತ್ತು ಸೇಲಂನಿಂದ 20 ವೈದ್ಯರನ್ನು ತುರ್ತಾಗಿ ಕರೂರಿಗೆ ಕಳುಹಿಸಲಾಗಿದೆ,” ಎಂದು ತಮಿಳುನಾಡು ಆರೋಗ್ಯ ಸಚಿವ ಮಾ. ಸುಬ್ರಮಣಿಯನ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
- Advertisement -


