Wednesday, June 3, 2026
Homeಕರಾವಳಿಮಂಗಳೂರುಮಂಗಳೂರು: ಜ್ಯುವೆಲ್ಲರಿ ಅಂಗಡಿಯ ಸಿಬ್ಬಂದಿಯನ್ನು ಕಿಡ್ನ್ಯಾಪ್ ಮಾಡಿ 1.5 ಕೋ.ರೂ. ಮೌಲ್ಯದ ಚಿನ್ನದ ಗಟ್ಟಿ ದರೋಡೆ...

ಮಂಗಳೂರು: ಜ್ಯುವೆಲ್ಲರಿ ಅಂಗಡಿಯ ಸಿಬ್ಬಂದಿಯನ್ನು ಕಿಡ್ನ್ಯಾಪ್ ಮಾಡಿ 1.5 ಕೋ.ರೂ. ಮೌಲ್ಯದ ಚಿನ್ನದ ಗಟ್ಟಿ ದರೋಡೆ ಪ್ರಕರಣ; ಅಪ್ರಾಪ್ತ ಸೇರಿ ಐವರು ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

- Advertisement -
- Advertisement -

ಮಂಗಳೂರು: ಜ್ಯುವೆಲ್ಲರಿ ಅಂಗಡಿಯ ಸಿಬ್ಬಂದಿಯನ್ನು ಕಿಡ್ನ್ಯಾಪ್ ಮಾಡಿ 1.5 ಕೋ.ರೂ. ಮೌಲ್ಯದ ಚಿನ್ನದ ಗಟ್ಟಿ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಅಪ್ರಾಪ್ತ ಸೇರಿ ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.ಫಾರಿಶ್ (18), ಸಫ್ವಾನ್ (23), ಅರಾಫತ್ ಆಲಿ(18), ಫರಾಝ್(19) ಹಾಗೂ ಓರ್ವ ಅಪ್ರಾಪ್ತ ಬಂಧಿತ. ಬಂಧಿತರೆಲ್ಲಾ ಉಳ್ಳಾಲ ತಾಲೂಕಿನವರು.

ಪ್ರಕರಣದ ವಿವರ; ದಿನಾಂಕ 26-09-2025 ರಂದು ಚಾಯ್ಸ್ ಗೋಲ್ಡ್ ಎಂಬ ಹೆಸರಿನ ಚಿನ್ನಾಭರಣದ ಅಂಗಡಿಯ ಕೆಲಸಗಾರ ಮುಸ್ತಾಫ ಎಂಬವರು ಸ್ಕೂಟರ್ ಸೀಟಿನ ಅಡಿಯಲ್ಲಿ ಚಿನ್ನದ ಗಟ್ಟಿಯನ್ನು ಇಟ್ಟುಕೊಂಡು ಹೋಗುತ್ತಿದ್ದಾಗ ರಾತ್ರಿ ಸುಮಾರು 8-45ರ ವೇಳೆಗೆ ಮಂಗಳೂರು ಕಾರ್ ಸ್ಟ್ರೀಟ್ ವೆಂಕಟರಮಣ ದೇವಸ್ಥಾನದ ಎದುರಿನ ರಸ್ತೆಯಲ್ಲಿ ಇಬ್ಬರು ಆರೋಪಿಗಳು ಸ್ಕೂಟರೊಂದರಲ್ಲಿ ಬಂದು ತಡೆದು ನಿಲ್ಲಿಸಿದ್ದಾರೆ. ಇದೇ ವೇಳೆಗೆ ಉಳಿದ ಆರೋಪಿಗಳು ಕಾರೊಂದರಲ್ಲಿ ಬಂದು ಮುಸ್ತಾಫ ರವರನ್ನು ಕಾರಿನಲ್ಲಿ ಅಪಹರಿಸಿಕೊಂಡು ಹೋಗಿ ಹಲ್ಲೆ ನಡೆಸಿ ಮಂಗಳೂರು ಎಕ್ಕೂರು ಎಂಬಲ್ಲಿ ಕಾರಿನಿಂದ ಇಳಿಸಿ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿಕೊಂಡು ಹೋಗಿದ್ದು, ಈ ಬಗ್ಗೆ  ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿತ್ತು. ಅದರಂತೆ ತನಿಖೆ ನಡೆಸಿದ ಪೊಲೀಸರು ದಿನಾಂಕ 29-09-2025 ರಂದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ಕಾನೂನು ಸಂಘರ್ಷಕ್ಕೊಳಗಾದ ಬಾಲಕನು ಮಂಗಳೂರು ಹಂಪನಕಟ್ಟೆಯಲ್ಲಿರುವ ಚಾಯ್ಸ್ ಗೋಲ್ಡ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದವನು, ಇದೇ ಅಂಗಡಿಯಲ್ಲಿ ಈ ಹಿಂದೆ ಕೆಲಸ ಮಾಡಿಕೊಂಡಿದ್ದ ಫಾರಿಶ್ ಎಂಬಾತನಿಗೆ ಚಿನ್ನದ ಗಟ್ಟಿಯನ್ನು ಕೊಂಡುಹೋಗುವ ಮಾಹಿತಿ ನೀಡುವಂತೆ ತಿಳಿಸಿದ ಮೇರೆಗೆ ಪಿರ್ಯಾದಿ ಮುಸ್ತಾಫ ರವರು ಚಿನ್ನದ ಗಟ್ಟಿಯನ್ನು ದಿನಾಂಕ 26-09-2025 ರಂದು ರಾತ್ರಿ 8-30 ಗಂಟೆಗೆ ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಅವರ ಚಲನವಲನದ ಮಾಹಿತಿಯನ್ನು ಆರೋಪಿ ಫಾರಿಶ್ ನಿಗೆ ನೀಡಿದ್ದು ಅದರಂತೆ ಈ ಆರೋಪಿಗಳು ಇತರೆ ಆರೋಪಿಗಳೊಂದಿಗೆ ಸೇರಿ ಚಿನ್ನದ ಗಟ್ಟಿಯನ್ನು ದರೋಡೆ ಮಾಡಲು ಪೂರ್ವಯೋಜಿತ ಸಂಚು ರೂಪಿಸಿ, ಆರೋಪಿ ಸಫ್ವಾನ್ ಈತನು ಕೃತ್ಯಕ್ಕೆ ಕಾರನ್ನು ಒದಗಿಸಿದ್ದು,  ಮುಸ್ತಾಫರವರು ತನ್ನ ಸ್ಕೂಟರಿನ ಸೀಟಿನ ಅಡಿಯಲ್ಲಿ  ಚಿನ್ನದ ಗಟ್ಟಿಯನ್ನು ಇಟ್ಟುಕೊಂಡು ಹೋಗುತ್ತಿದ್ದಾಗ ಆರೋಪಿಗಳಾದ ಅರಾಫತ್ ಆಲಿ ಮತ್ತು ಫರಾಝ್ ರವರು ಸುಜುಕಿ ಆಕ್ಸೆಸ್ ಸ್ಕೂಟರಿನಲ್ಲಿ ಬಂದು ಅಡ್ಡಗಟ್ಟಿ, ಇದೇ ಸಮಯ ಉಳಿದ ಆರೋಪಿಗಳು ಸಫ್ವಾನ್ ಒದಗಿಸಿದ ಬಿಳಿ ಬಣ್ಣದ ಕಾರೊಂದರಲ್ಲಿ ಬಂದು ಪಿರ್ಯಾದಿ ಮುಸ್ತಾಫರವರನ್ನು ಬಲತ್ಕಾರವಾಗಿ ಕಾರಿನಲ್ಲಿ ಹಾಕಿ ಅಪಹರಿಸಿಕೊಂಡು ಹೋಗಿ ಹಲ್ಲೆ ಮಾಡಿ ಮಂಗಳೂರು ಎಕ್ಕೂರು ಎಂಬಲ್ಲಿ ಅವರನ್ನು ಕಾರಿನಿಂದ ಇಳಿಸಿ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿಕೊಂಡು ಹೋಗಿದ್ದರು.

ಈ ಪ್ರಕರಣದಲ್ಲಿ ಕೃತ್ಯಕ್ಕೆ ಉಪಯೋಗಿಸಿದ KA-19HT-8545 ನೋಂದಣಿ ಸಂಖ್ಯೆಯ ಸುಜುಕಿ ಆಕ್ಸೆಸ್ ಸ್ಕೂಟರನ್ನು ಸ್ವಾಧೀನಪಡಿಸಿಕೊಂಡಿದ್ದು ಉಳಿದ ಆರೋಪಿಗಳನ್ನು ದಸ್ತಗಿರಿ ಮಾಡಲು ಹಾಗೂ ಕೃತ್ಯಕ್ಕೆ ಬಳಸಿದ ಕಾರು ಮತ್ತು ಸೊತ್ತನ್ನು ಸ್ವಾಧೀನಪಡಿಸಿಕೊಳ್ಳಲು ಬಾಕಿ ಇರುತ್ತದೆ. ಈ ಪ್ರಕರಣದ ಆರೋಪಿಗಳನ್ನು ಉಪ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ) ಮಂಗಳೂರು ನಗರ ಮತ್ತು ಸಹಾಯಕ ಪೊಲೀಸ್ ಆಯುಕ್ತರು, ಕೇಂದ್ರ ಉಪವಿಭಾಗ, ಸಹಾಯಕ ಪೊಲೀಸ್ ಆಯುಕ್ತರು, ಸಿಸಿಬಿ ಘಟಕ ಮಂಗಳೂರು ರವರ ಮಾರ್ಗದರ್ಶನದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣಾ ಅಧಿಕಾರಿ ಸಿಬ್ಬಂದಿಯವರು ಹಾಗೂ ಮಂಗಳೂರು ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿಯವರ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

- Advertisement -

Latest News

error: Content is protected !!