Monday, June 8, 2026
Homeಕರಾವಳಿಮಂಗಳೂರುಬೆಳ್ತಂಗಡಿ ; ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದ ಮಾತೆಯ ವಿಗ್ರಹದ ಪೀಠಾರ್ಪಣೆ

ಬೆಳ್ತಂಗಡಿ ; ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದ ಮಾತೆಯ ವಿಗ್ರಹದ ಪೀಠಾರ್ಪಣೆ

- Advertisement -
- Advertisement -

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ನೂತನವಾಗಿ ನಿರ್ಮಿಸಲ್ಪಟ್ಟ ಗೌಡರ ಯಾನೆ ಒಕ್ಕಲಿಗರ ಸಮುದಾಯ ಭವನ ಮತ್ತು ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಸಂದರ್ಭದಲ್ಲಿ ಶೃಂಗೇರಿ ಜಗದ್ಗುರು ಶ್ರೀ ಶ್ರೀ ವಿದುಶೇಖರ ಭಾರತಿ ಮಹಾ ಸ್ವಾಮೀಜಿ ಆಶೀರ್ವಚನ ನೀಡಿ ಸಂಸ್ಥೆಗೆ ಕೊಡುಗೆಯಾಗಿ ನೀಡಿದ್ದ ಶಾರದ ಮಾತೆಯ ವಿಗ್ರಹವನ್ನು ಶಾರದ ಪೂಜೆಯ ಸಂದರ್ಭದಲ್ಲಿ ಪೀಠಾರ್ಪಣೆ ಮಾಡಲಾಯಿತು.

ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕಾರ್ಯದರ್ಶಿ ಗಣೇಶ್ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎಂ, ನಿರ್ದೇಶಕರಾದ ಜಯಾನಂದ ಗೌಡ, ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಶಿಕ್ಷಣ ಸಂಸ್ಥೆಯ ನಿರ್ದೇಶಕರು, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಪದಾಧಿಕಾರಿಗಳು, ಸದಸ್ಯರು, ವಾಣಿ ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ, ವಾಣಿ ಅಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ, ಕಾಲೇಜಿನ ಉಪನ್ಯಾಸಕ ವೃಂದ, ಶಾಲೆಯ ಆಧ್ಯಾಪಕ ವೃಂದ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!