Thursday, June 4, 2026
Homeಕರಾವಳಿಉಡುಪಿಉಡುಪಿ: ಉಚ್ಚಿಲದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಉಡುಪಿ: ಉಚ್ಚಿಲದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

- Advertisement -
- Advertisement -

ಉಡುಪಿ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಉಚ್ಚಿಲದಲ್ಲಿ ನಡೆದಿದೆ.ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಬೆಳಗಿನ ಜಾವ ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಬೈಕ್ ಸವಾರನ ಮಾಹಿತಿ ತಿಳಿದು ಬಂದಿಲ್ಲ. ಉಡುಪಿ ಕಡೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಪುತ್ತೂರು ನೋಂದಣಿ ಇರುವ ಬೈಕಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದಿದ್ದು, ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಪಡುಬಿದ್ರೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!