- Advertisement -
![]()
- Advertisement -
ಮೈಸೂರು: ದಸರಾ ಜಂಬೂ ಸವಾರಿಗೆ ಅರಮನೆ ಆವರಣದಲ್ಲಿ ಇಂದು ಚಾಲನೆ ಸಿಕ್ಕಿದೆ. ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿ ಧ್ವಜಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ನಂದಿ ಧ್ವಜ ಪೂಜೆ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಮತ್ತು ಮೈಸೂರು ಜಿಲ್ಲೆಯ ಶಾಸಕರು ಉಪಸ್ಥಿತರಿದ್ದರು.
ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊರುತ್ತಿದ್ದು, ಕುಮ್ಕಿ ಆನೆಗಳು ಸೇರಿದಂತೆ 14 ಆನೆಗಳು ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕುತ್ತಿವೆ.
ಈ ಬಾರಿಯ ದಸರಾ ಜಂಬೂ ಸವಾರಿಯಲ್ಲಿ 58 ಸ್ತಬ್ಧಚಿತ್ರಗಳು ಪ್ರದರ್ಶನಗೊಂಡಿದ್ದು, ವಿವಿಧ ಜಿಲ್ಲೆಗಳ140ಕ್ಕೂ ಹೆಚ್ಚು ಕಲಾ ತಂಡಗಳು ಭಾಗವಹಿಸಿವೆ.
ರಾತ್ರಿ 7 ಗಂಟೆಗೆ ಬನ್ನಿ ಮಂಟಪದಲ್ಲಿ ದಸರಾ ಪಂಜಿನ ಕವಾಯತು ನಡೆಯಲಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗವಹಿಸಲಿದ್ದಾರೆ.
- Advertisement -


