Thursday, June 4, 2026
Homeಕರಾವಳಿಉಡುಪಿಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಅಣ್ಣಾಮಲೈ ಭೇಟಿ

ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಅಣ್ಣಾಮಲೈ ಭೇಟಿ

- Advertisement -
- Advertisement -

ಕೊಲ್ಲೂರು: ಮಾಜಿ ಪೊಲೀಸ್ ಅಧಿಕಾರಿ,  ತಮಿಳುನಾಡು ಬಿಜೆಪಿ ಮುಖಂಡ ಅಣ್ಣಾಮಲೈ ಅವರು ಕೊಲ್ಲೂರು ಮೂಕಾಂಬಿಕೆಯ ದರ್ಶನ ಮಾಡಿದ್ದಾರೆ. ವಿಜಯದಶಮಿಯ ಹಿನ್ನೆಲೆ ಮೂಕಾಂಬಿಕೆಯ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಿ ದರ್ಶನಕ್ಕಾಗಿ ಇಂದು ಮುಂಜಾನೆಯೇ ದೇವಾಲಯಕ್ಕೆ ಅವರು ಆಗಮಿಸಿದ್ದರು. ಈ ವೇಳೆ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಅಣ್ಣಾಮಲೈ ಅವರಿಗೆ ವಿಶೇಷ ಗೌರವ ಸಲ್ಲಿಸಿದರು.

ಈ ವೇಳೆ ಅಣ್ಣಾಮಲೈ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು , ಭಕ್ತರು ಮುಗಿಬಿದ್ದರು. ಕೆಲಹೊತ್ತು ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರೊಂದಿಗೆ  ಮಾತನಾಡಿದ ಬಿಜೆಪಿ ಮುಖಂಡ ಬಳಿಕ ಅಲ್ಲಿಂದ ತೆರಳಿದರು. ಈ ಹಿಂದೆ ಉಡುಪಿಯಲ್ಲಿ ಎಸ್ಪಿ ಆಗಿಯೂ ಕಾರ್ಯ ನಿರ್ವಹಿಸಿದ್ದರು.

- Advertisement -

Latest News

error: Content is protected !!