Saturday, June 6, 2026
HomeWorldಅಮೆರಿಕದ ರಿಪಬ್ಲಿಕನ್ ಪಕ್ಷ ಶಟ್‌ಡೌನ್: 7.5 ಲಕ್ಷಕ್ಕೂ ಅಧಿಕ ನೌಕರರಿಗೆ ವೇತನರಹಿತ ಕಡ್ಡಾಯ ರಜೆ...

ಅಮೆರಿಕದ ರಿಪಬ್ಲಿಕನ್ ಪಕ್ಷ ಶಟ್‌ಡೌನ್: 7.5 ಲಕ್ಷಕ್ಕೂ ಅಧಿಕ ನೌಕರರಿಗೆ ವೇತನರಹಿತ ಕಡ್ಡಾಯ ರಜೆ ಘೋಷಣೆ

- Advertisement -
- Advertisement -

ವಾಷಿಂಗ್ಟನ್: ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಮತ್ತು ವಿರೋಧ ಪಕ್ಷವಾದ ಡೆಮಾಕ್ರೆಟಿಕ್ ನಡುವೆ ಜಿದ್ದಾಜಿದ್ದಿ ಶುರುವಾಗಿದ್ದು, ಇದರ ಪರಿಣಾಮವಾಗಿ ಸರ್ಕಾರ ಶಟ್‌ಡೌನ್ ಆಗಿದೆ. 7.5 ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರಿಗೆ ಈ ಹಿನ್ನೆಲೆಯಲ್ಲಿ ವೇತನರಹಿತ ಕಡ್ಡಾಯ ರಜೆ ಘೋಷಿಸಲಾಗಿದೆ.

ರಿಪಬ್ಲಿಕ್ ಪಕ್ಷ ಮಂಡಿಸಿದ ಆರೋಗ್ಯ ಸೇವಾ ಅನುದಾನ ಮಸೂದೆಯನ್ನು ಡೆಮಾಕ್ರೆಟಿಕ್ ಸದಸ್ಯರು ಸೆನೆಟ್‌ನಲ್ಲಿ ವಿರೋಧಿಸಿದ್ದಾರೆ ಎನ್ನಲಾಗಿದೆ.

ಇನ್ನು ಸರ್ಕಾರದಿಂದ ಅ.1ರ ಮಧ್ಯರಾತ್ರಿ 12:01ಕ್ಕೆ ಅಧಿಕೃತವಾಗಿ ಶಟ್‌ಡೌನ್ ಘೋಷಿಸಲಾಗಿದೆ. ಶಟ್ ಡೌನ್ ಆಗಲು ಪ್ರಮುಖ ಕಾರಣ ಅನುದಾನದ ಮಸೂದೆಗೆ ಬಹುಮತ ಸಿಗದೇಇದ್ದುದರಿಂದ ಬಿಲ್ ಪಾಸ್ ಆಗಿಲ್ಲ. ಈ ಹಿನ್ನೆಲೆಯಲ್ಲಿ 7.5 ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರ ಭವಿಷ್ಯ ಅತಂತ್ರವಾಗಿದೆ.

ಶಟ್‌ಡೌನ್ ಪರಿಣಾಮಗಳು:

1.ದೇಶದ ಸುರಕ್ಷತೆ ಸೇರಿ ಕೆಲ ಅಗತ್ಯ ಸೇವೆಗಳು ಮುಂದುವರಿಯಲಿದ್ದು ಕಾನೂನಿನ ಪ್ರಕಾರ, ಅಗತ್ಯ ಸೇವೆಗಳ ನೌಕರರು ಕೆಲಸ ಮಾಡಲೇಬೇಕು. ಆದರೆ ಅವರಿಗೆ ಶಟ್‌ಡೌನ್ ಮುಗಿಯುವವರೆಗೂ ವೇತನ ಸಿಗುವುದಿಲ್ಲ. ಸೇನಾ ಸಿಬ್ಬಂದಿ, ಗಡಿ ಭದ್ರತಾ ಪಡೆ, ಮತ್ತು ಕಾನೂನು ಜಾರಿ ಸಂಸ್ಥೆಗಳು ಕರ್ತವ್ಯದಲ್ಲಿರುತ್ತವೆ.

2. ಆಸ್ಪತ್ರೆಗಳಲ್ಲಿನ ವೈದ್ಯಕೀಯ ಆರೈಕೆ ಮತ್ತು ಏರ್ ಟ್ರಾಫಿಕ್ ಕಂಟ್ರೋಲ್ ಮುಂದುವರಿಯುತ್ತದೆ. ಸಾಮಾಜಿಕ ಭದ್ರತೆ ಮತ್ತು ಮೆಡಿಕೇರ್ ಚೆಕ್‌ಗಳನ್ನು ಫಲಾನುಭವಿಗಳಿಗೆ ಕಳುಹಿಸಲಾಗುತ್ತದೆ.

3. ನಾಸಾದ ಬಾಹ್ಯಾಕಾಶ ಯೋಜನೆಗಳು ಮತ್ತು ಅಧ್ಯಕ್ಷ ಟ್ರಂಪ್‌ರ ವಲಸೆ ನೀತಿಗೆ ಸಂಬಂಧಿಸಿದ ಕಾರ್ಯಗಳು ಮುಂದುವರಿಯಲಿವೆ. ಅಗತ್ಯವಲ್ಲದ ಎಂದು ಪರಿಗಣಿಸಲಾದ ಸುಮಾರು 7.50 ಲಕ್ಷ ನೌಕರರನ್ನು ವೇತನರಹಿತ ಕಡ್ಡಾಯ ರಜೆ ಮೇಲೆ ಕಳಿಸಲಾಗುತ್ತದೆ.

4. ಶಿಕ್ಷಣ ಇಲಾಖೆಯ ಶೇ. 90ರಷ್ಟು ಸಿಬ್ಬಂದಿ ರಜೆಯಲ್ಲಿರುತ್ತಾರೆ. ರಾಷ್ಟ್ರೀಯ ಉದ್ಯಾನವನಗಳು, ವಸ್ತುಸಂಗ್ರಹಾಲಯಗಳು ಸಂಪೂರ್ಣವಾಗಿ ಮುಚ್ಚಲ್ಪಡುತ್ತವೆ.

5. ಸಣ್ಣ ಉದ್ಯಮಗಳಿಗೆ ನೀಡುವ ಸಾಲ ಸ್ಥಗಿತಗೊಳ್ಳಲಿದೆ. ಆಹಾರ ನೆರವು ಕಾರ್ಯಕ್ರಮಗಳು, ವಿದ್ಯಾರ್ಥಿ ವೇತನ ವಿತರಣೆ, ಮತ್ತು ಆಹಾರ ತಪಾಸಣಾ ಕಾರ್ಯಗಳಿಗೆ ಅಡ್ಡಿಯಾಗಲಿದೆ. ದೇಶದ ಆರ್ಥಿಕತೆಯ ಪ್ರಮುಖ ಸೂಚಕವಾದ ಕಾರ್ಮಿಕ ಇಲಾಖೆಯ ಮಾಸಿಕ ನಿರುದ್ಯೋಗ ವರದಿ ಕೂಡ ಪ್ರಕಟವಾಗುವುದಿಲ್ಲ.

- Advertisement -

Latest News

error: Content is protected !!