- Advertisement -
![]()
- Advertisement -
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆ ಕಂಡಿದೆ. ಬರೋಬ್ಬರಿ 208 ಪ್ರಕರಣಗಳು ಇಂದು ಒಂದೇ ದಿನ ವರದಿಯಾಗಿದೆ. ಆ ಮೂಲಕ ಸೋಂಕಿತರ ಸಂಖ್ಯೆ 5306ಕ್ಕೆ ಏರಿಕೆಯಾಗಿದೆ. ಇನ್ನು ಕೋವಿಡ್ ಗೆ ಇಂದು 7 ಮಂದಿ ಬಲಿಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2725 ಸಕ್ರೀಯ ಪ್ರಕರಣಗಳಿದ್ದು, 2456 ಮಂದಿ ಗುಣಮುಖರಾಗಿದ್ದಾರೆ. ಇಂದು ಒಂದೇ ದಿನ 118 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 123 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ.
ಇನ್ನು ಉಡುಪಿಯಲ್ಲಿ ಇಂದು 173 ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 3834ಕ್ಕೆ ಏರಿಕೆ ಕಂಡಿದೆ. ಇನ್ನು 4 ಮಂದಿ ಇಂದು ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಸದ್ಯ ಜಿಲ್ಲೆಯಲ್ಲಿ 1558 ಸಕ್ರೀಯ ಪ್ರಕರಣಗಳಿದ್ದು, 2311 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ 25 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
- Advertisement -


