ಉಡುಪಿ: ಮಲ್ಪೆ ಬೀಚ್ ನಲ್ಲಿ ಇಬ್ಬರು ಪ್ರವಾಸಿಗರು ನೀರುಪಾಲಾದ ಘಟನೆ ಅ. 3 ರಂದು ನಡೆದಿದೆ. ಅದರಲ್ಲಿ ಓರ್ವ ನಾಪತ್ತೆಯಾಗಿದ್ದು ಮತ್ತೋರ್ವನ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸನ ಮೂಲದ ಮಿಥುನ್, ಶಶಾಂಕ್ ನೀರುಪಾಲಾಗಿದ್ದರು. ಅದರಲ್ಲಿ ಮಿಥುನ್ ಸಮುದ್ರದಲ್ಲಿ ನಾಪತ್ತೆಯಾಗಿದ್ದು. ಶಶಾಂಕ್ ನನ್ನು ಸಹ ಪ್ರವಾಸಿಗರು ರಕ್ಷಿಸಿದ್ದಾರೆ. ಶಶಾಂಕ್ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದಸರಾ ರಜೆ ಹಿನ್ನೆಲೆಯಲ್ಲಿ ಸಹಸ್ರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು.ಸಾವಿರಾರು ಜನರಿಗೆ ಕೇವಲ ಮೂರು ಜನ ಲೈಫ್ ಗಾರ್ಡ್ ನಿಯೋಜನೆ ಮಾಡಲಾಗಿತ್ತು. ಅವರಿಗೆ ಈಜು ಬರುತ್ತಿರಲಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಇದೀಗ ಉಡುಪಿ ಜಿಲ್ಲಾಡಳಿತದ ಭಾರೀ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಕಳೆದ ಒಂದು ವಾರದಿಂದ ಜಿಲ್ಲಾಡಳಿತ ಜಲಕ್ರೀಡೆ ಬಂದ್ ಮಾಡಿದೆ. ಇದ್ರಿಂದ ನೂರಾರು ಸಂಖ್ಯೆಯಲ್ಲಿ ಇದ್ದ ಲೈಫ್ ಗಾರ್ಡ್ ಗಳು ವಾಪಸ್ ಹೋಗಿದ್ದಾರೆ. ಇದೀಗ ಜಿಲ್ಲಾಡಳಿತದ ಭಾರೀ ನಿರ್ಲಕ್ಷ್ಯಕ್ಕೆ ಪ್ರವಾಸಿಗರು ಬಲಿಯಾಗಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಘಟನೆಯ ಬಗ್ಗೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


