Thursday, June 4, 2026
Homeಆರಾಧನಾಅಕ್ಟೋಬರ್.‌9ರಂದು ಹಾಸನಾಂಬ ದೇವಾಲಯ ಓಪನ್‌

ಅಕ್ಟೋಬರ್.‌9ರಂದು ಹಾಸನಾಂಬ ದೇವಾಲಯ ಓಪನ್‌

- Advertisement -
- Advertisement -

ಅಕ್ಟೋಬರ್.‌9ರಂದು ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಿದೆ.

ಈಗಾಗಲೇ ಜಿಲ್ಲಾಡಳಿತದಿಂದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಪೂರ್ವ ಸಿದ್ಧತೆ ನಡೆದಿದ್ದು, ಅಕ್ಟೋಬರ್.‌9ರಂದು ಶಾಸ್ತ್ರೋಕ್ತವಾಗಿ ಹಾಸನಾಂಬ ದೇವಿಯ ಬಾಗಿಲು ತೆರೆಯಲಿದ್ದು, ಅಕ್ಟೋಬರ್.‌23ರಂದು ಮುಚ್ಚಲಾಗುವುದು. ಈ ಬಾರಿ ದೇವಿಯ ದರ್ಶನದ ಜೊತೆ ಟೂರ್‌ ಪ್ಯಾಕೇಜ್‌, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಹಾಸನಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ದೇವಸ್ಥಾನಕ್ಕೆ ಬಣ್ಣ ಹಚ್ಚುವ ಕಾರ್ಯ ಪೂರ್ಣಗೊಂಡಿದೆ. ಹಾಸನ ನಗರದಲ್ಲಿ ಸ್ವಾಗತ ಕಮಾನು, ಲೈಟಿಂಗ್ಸ್‌, ಎಲ್‌ಇಡಿ ಅಳವಡಿಕೆ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಭಕ್ತರಿಗೆ ಅನುಕೂಲ ಕಲ್ಪಿಸಲು ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಇನ್ನು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ, ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಪೂರ್ವಭಾವಿ ಸಭೆ ನಡೆಸಿ ಅಗತ್ಯ ಸಿದ್ಧತೆಗೆ ಸೂಚನೆ ನೀಡಿದ್ದಾರೆ.

- Advertisement -

Latest News

error: Content is protected !!