ಬಂಟ್ವಾಳ; ಅಬ್ದುಲ್ ರೆಹಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 14 ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ದಿನಾಂಕ 27-05-2025 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಒಟ್ಟು 13 ಆರೋಪಿಗಳನ್ನು ಬಂಧಿಸಲಾಗಿದೆ. 1) ದೀಪಕ್ 2) ಚಿಂತನ್, 3) ಪ್ರಥ್ವಿರಾಜ್ ಜೋಗಿ 4) ಸುಮಿತ್ ಬಿ. ಆಚಾರ್ಯ 5) ವಿ.ರವಿರಾಜ ಮೂಲ್ಯ 6) ಅಭಿನ್ ರೈ 7) ತೇಜಾಕ್ಷ 8) ರವಿಸಂಜಯ್ ಜಿ.ಎಸ್. 9) ಶಿವಪ್ರಸಾದ್ ತುಂಬೆ, 10) ಪ್ರದೀಪ 11) ಶಾಹಿತ್ @ ಸಾಹಿತ್ 12) ಸಚಿನ್ @ ಸಚ್ಚು ರೊಟ್ಟಿಗುಡ್ಡೆ 13) ರಂಜಿತ್ ಬಂಧಿತರು. ಈ ಪ್ರಕರಣದ ಇನ್ನೊಬ್ಬ ಆರೋಪಿ ಭರತ್ ರಾಜ್ @ ಭರತ್ ಕುಮ್ಡೇಲು (29) ತಲೆಮರೆಸಿಕೊಂಡಿದ್ದಾನೆ. ಭರತ್ ಸೇರಿ 14 ಆರೋಪಿಗಳ ವಿರುದ್ಧ ಇದೀಗ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಹಲವು ವರ್ಷಗಳಿಂದ ಕೊಲೆ, ಕೊಲೆ ಯತ್ನ, ಪ್ರಚೋದನಕಾರಿ ಭಾಷಣಗಳು ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದು, ಸಮಾಜದಲ್ಲಿ ಅಶಾಂತಿ ಮತ್ತು ಕೋಮು ಸಂಘರ್ಷಕ್ಕೆ ಕಾರಣರಾಗಿದ್ದಾರೆ. ಹೀಗಾಗಿ, ಅವರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ-2000 (THE KARNATAKA CONTROL OF ORGANISED CRIME ACT- 2000) ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.


