Thursday, June 4, 2026
Homeತಾಜಾ ಸುದ್ದಿಬಿಹಾರ ವಿಧಾನಸಭೆಗೆ ಚುನಾವಣೆ ಘೋಷಣೆ; ಎರಡು ಹಂತಗಳಲ್ಲಿ ಮತದಾನ

ಬಿಹಾರ ವಿಧಾನಸಭೆಗೆ ಚುನಾವಣೆ ಘೋಷಣೆ; ಎರಡು ಹಂತಗಳಲ್ಲಿ ಮತದಾನ

- Advertisement -
- Advertisement -

ನವದೆಹಲಿ: ಬಿಹಾರ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದೆ. ಒಟ್ಟು 243 ವಿಧಾನಸಭೆ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

ಮೊದಲ ಹಂತದ ಮತದಾನ ನವೆಂಬರ್ 6 ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ನವೆಂಬರ್ 11 ರಂದು ನಡೆಯಲಿದೆ. ನವೆಂಬರ್ 14 ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

38 ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳಿದ್ದು, ಎರಡು ಪರಿಶಿಷ್ಟ ವರ್ಗದ ಮೀಸಲು ಕ್ಷೇತ್ರಗಳಿವೆ. 22 ವರ್ಷಗಳ ಬಳಿಕ ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಾಗಿದ್ದು ಒಟ್ಟು 7 ಕೋಟಿ 43 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ.

818 ಮತದಾರರಿಗೆ ಒಂದು ಮತದಾನ ಕೇಂದ್ರ ಸ್ಥಾಪನೆ ಮಾಡಲಾಗುತ್ತಿದ್ದು, ಪ್ರತಿ ಕೇಂದ್ರದಲ್ಲೂ ವೆಬ್ ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

85 ವರ್ಷ ಮೇಲ್ಪಟ್ಟ ಹಿರಿಯ ನಾಯಕರಿಗೆ ಮನೆಯಿಂದಲೇ ಮತದಾನಕ್ಕೆ ಚುನಾವಣಾ ಆಯೋಗ ವ್ಯವಸ್ಥೆ ಕಲ್ಪಿಸುತ್ತಿದೆ.

- Advertisement -

Latest News

error: Content is protected !!