- Advertisement -
![]()
- Advertisement -
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮುಕ್ತಾಯವಾಗದ ಹಿನ್ನೆಲೆಯಲ್ಲಿ ಶಿಕ್ಷಕರ
ಸಮೀಕ್ಷೆ ಕಾರ್ಯದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
ರಾಜ್ಯಾದ್ಯಂತ ಅಕ್ಟೋಬರ್ 12 ರವರೆಗೆ ಸಮೀಕ್ಷೆಗೆ ಅವಧಿ ವಿಸ್ತರಣೆ ಮಾಡಲಾಗಿದ್ದು, ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿರುವ ಶಿಕ್ಷಕರು ಅಕ್ಟೋಬರ್ 8 ರಿಂದ 12ರವರೆಗೆ ಶಾಲೆ ಮತ್ತು ಸಮೀಕ್ಷೆ ಎರಡೂ ಕೆಲಸಗಳನ್ನು ನಿರ್ವಹಿಸಬೇಕಾಗಿದೆ.
ಶಿಕ್ಷಕರು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಾಲೆಯಲ್ಲಿ ಕೆಲಸ ನಿರ್ವಹಿಸಿ ಮಧ್ಯಾಹ್ನ 1 ಗಂಟೆಯ ನಂತೆ ಸಮೀಕ್ಷಾ ಕಾರ್ಯದಲ್ಲಿ ತೊಡಗುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಇನ್ನು ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಅಕ್ಟೋಬರ್ 24ರವರೆಗೆ ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರಿಗೆ ಅವಧಿ ವಿಸ್ತರಣೆ ಮಾಡಲಾಗಿದೆ.
- Advertisement -


