Friday, June 5, 2026
Homeಕರಾವಳಿರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರು, ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀ ಕೃ. ನರಹರಿ ನಿಧನ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರು, ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀ ಕೃ. ನರಹರಿ ನಿಧನ

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೃ. ನರಹರಿ ಅವರು ಇಂದು(ಅ.08) ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ಇಹಲೋಕ ತ್ಯಜಿಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಇವರು ಸಮಾಜ ಹಾಗೂ ನಾಡಿನ ಒಳಿತಿಗೆ ನೀಡಿದ ಕೊಡುಗೆ ಅಪ್ರತಿಮವಾದುದು ಹಾಗೂ ಪ್ರೇರಣಾದಾಯಕವಾಗಿದೆ.

ಅವರ ನಿಧನಕ್ಕೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ. ಕೃ ನರಹರಿ ಅವರು ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟದಲ್ಲಿ ಜೈಲುವಾಸವನ್ನೂ ಅನುಭವಿಸಿದ್ದರು.

- Advertisement -

Latest News

error: Content is protected !!