Saturday, June 13, 2026
Homeತಾಜಾ ಸುದ್ದಿಚಾಮರಾಜನಗರದಲ್ಲಿ ನಿರ್ಮಾಣವಾಗುತ್ತಿದೆ ರಾಜ್ಯದಲ್ಲೇ ಅತಿ ಎತ್ತರದ ಪೊಲೀಸ್ ಹುತಾತ್ಮ ಸ್ಮಾರಕ

ಚಾಮರಾಜನಗರದಲ್ಲಿ ನಿರ್ಮಾಣವಾಗುತ್ತಿದೆ ರಾಜ್ಯದಲ್ಲೇ ಅತಿ ಎತ್ತರದ ಪೊಲೀಸ್ ಹುತಾತ್ಮ ಸ್ಮಾರಕ

- Advertisement -
- Advertisement -

ಚಾಮರಾಜನಗರ: ರಾಜ್ಯದಲ್ಲೇ ಅತಿ ಎತ್ತರದ ಪೊಲೀಸ್ ಹುತಾತ್ಮ ಸ್ಮಾರಕವನ್ನು ಚಾಮರಾಜನಗರದಲ್ಲಿ ನಿರ್ಮಾಣ ಮಾಡಲಾಗುತ್ತಿದೆ.

ಚಾಮರಾಜನಗರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಗ್ರಾನೈಟ್ ಅಳವಡಿಸಲ್ಪಟ್ಟ 27 ಅಡಿ ಎತ್ತರದ ಸ್ಮಾರಕ‌ ನಿರ್ಮಾಣಗೊಂಡಿದೆ.

ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳಿಧರನ್ ಒಡೆತನದ ಕ್ಯಾಂಪಾ ಕೋಲಾ ಕಂಪನಿಯ ಸಿಎಸ್ಆರ್ ದೇಣಿಗೆ ಅಡಿಯಲ್ಲಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಹುತಾತ್ಮ ಪೊಲೀಸ್ ಸ್ಮಾರಕ ನಿರ್ಮಾಣಗೊಳ್ಳುತ್ತಿದೆ.

ಚಾಮರಾಜನಗರ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಹುತಾತ್ಮ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದ್ದು, ಅಕ್ಟೋಬರ್ 21 ರಂದು ನಡೆಯುವ ಪೊಲೀಸ್ ಹುತಾತ್ಮ ದಿನಾಚರಣೆಯಂದು ಅತಿ ಎತ್ತರದ ಸ್ಮಾರಕ ಲೋಕಾರ್ಪಣೆಗೊಳ್ಳಲಿದೆ.

- Advertisement -

Latest News

error: Content is protected !!