Saturday, June 6, 2026
Homeತಾಜಾ ಸುದ್ದಿಮಾಜಿ ಪ್ರಧಾನಿ ದೇವೇಗೌಡ ಆರೋಗ್ಯದಲ್ಲಿ ಚೇತರಿಕೆ; ಐಸಿಯುನಿಂದ ವಾರ್ಡ್ ಗೆ ಶಿಫ್ಟ್

ಮಾಜಿ ಪ್ರಧಾನಿ ದೇವೇಗೌಡ ಆರೋಗ್ಯದಲ್ಲಿ ಚೇತರಿಕೆ; ಐಸಿಯುನಿಂದ ವಾರ್ಡ್ ಗೆ ಶಿಫ್ಟ್

- Advertisement -
- Advertisement -

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆಯಾಗಿದೆ.

ಬೆಂಗಳೂರಿನ ಮಣಿಪಾಲ್ ಅಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಟ್ಟಿರುವ ದೇವೇಗೌಡರನ್ನು ಐಸಿಯು ನಿಂದ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.

ತೀವ್ರ ಜ್ವರ ಮತ್ತು ಮೂತ್ರದ ಸೋಂಕಿನ ಸಮಸ್ಯೆಯಿಂದ ಬಳಲುತ್ತಿದ್ದ ದೇವೇಗೌಡರನ್ನು ಕಳೆದ ಮಂಗಳವಾರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಂಗಳವಾರ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದ ದೇವೇಗೌಡರಿಗೆ ಮಣಿಪಾಲ್ ಆಸ್ಪತ್ರೆ ಮುಖ್ಯಸ್ಥ ಡಾ. ಸುದರ್ಶನ್ ಬಲ್ಲಾಳ್ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

Latest News

error: Content is protected !!