Saturday, June 6, 2026
Homeಕರಾವಳಿಮಂಗಳೂರುಮಂಗಳೂರು : ಮೀನು ಹಿಡಿಯಲು ಹೋದ ವ್ಯಕ್ತಿ ಸಮುದ್ರದಲ್ಲಿ ಮುಳುಗಿ ಸಾವು

ಮಂಗಳೂರು : ಮೀನು ಹಿಡಿಯಲು ಹೋದ ವ್ಯಕ್ತಿ ಸಮುದ್ರದಲ್ಲಿ ಮುಳುಗಿ ಸಾವು

- Advertisement -
- Advertisement -

ಮಂಗಳೂರು : ಮೀನು ಹಿಡಿಯಲು ಹೋದ ವ್ಯಕ್ತಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಅಳಿವೆ ಬಾಗಿಲಿನಲ್ಲಿ ಬುಧವಾರ ಸಂಜೆ ನಡೆದಿದೆ.ಮನೋಹರ್ ಪುತ್ರನ್ (53) ಮೃತ ದುರ್ದೈವಿ.

ಬುಧವಾರ ಸಂಜೆ ಸುಮಾರು 6:30ರ ವೇಳೆಗೆ ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯಲು ಪುತ್ರನ್ ಹೋಗಿದ್ದರು ಎನ್ನಲಾಗಿದೆ. ಈ ವೇಳೆ ಸಮುದ್ರ ಪಾಲಾಗಿ ಕಣ್ಮರೆಯಾಗಿದ್ದರು. ಮಾಹಿತಿ ಪಡೆದ ಪಣಂಬೂರು ಠಾಣಾ ಪೋಲಿಸರು ಸ್ಥಳಕ್ಕೆ ಧಾವಿಸಿ ಸ್ಥಳೀಯ ಮೀನುಗಾರರ ಸಹಾಯದಿಂದ ಹುಡುಕಾಟ ಆರಂಭಿಸಿ ಸುಮಾರು ರಾತ್ರಿ 9:30 ಸಮಯ ಮೃತ ದೇಹವನ್ನು ಮೇಲಕ್ಕೆತ್ತಲಾಯಿತು. ಪಣಂಬೂರು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!