- Advertisement -
![]()
- Advertisement -
ಬೆಳ್ತಂಗಡಿ : ಎಸ್.ಐ.ಟಿ ದಾಳಿ ವೇಳೆ ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ತಿಮರೋಡಿ ಮಹೇಶ್ ಶೆಟ್ಟಿ ವಿರುದ್ಧ ಸೆ.16 ರಂದು ಪ್ರಕರಣ ದಾಖಲಾದ ಸಂಬಂಧ ನಿರೀಕ್ಷಣಾ ಜಾಮೀನಿಗಾಗಿ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ತಮ್ಮ ವಕೀಲರಾದ ದಿನೇಶ್ ಹೆಗ್ಡೆ ಉಳಿಪಾಡಿ ಮೂಲಕ ಅರ್ಜಿ ಸಲ್ಲಿಸಲಾಗಿತ್ತು.
ವಾದ-ಪ್ರತಿವಾದ ನಡೆಸಿದ ನ್ಯಾಯಲಯ ಅ.9 ರಂದು(ಇಂದು) ಸಂಜೆ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಮಾಡಿದ್ದಾರೆ.
- Advertisement -


