ಮಂಗಳೂರು: ಕೊಲೆ ಯತ್ನ ಪ್ರಕರಣದಲ್ಲಿ ಕೋರ್ಟ್ ಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಉರ್ವಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕುದ್ರೋಳಿ ನಿವಾಸಿ ಮೊಹಮ್ಮದ್ ಸಿನಾನ್(24) ಬಂಧಿತ ಆರೋಪಿ.
2021 ರಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಿನಾನ್ ಕಳೆದ 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಈತನ ವಿರುದ್ದ ಘನ ನ್ಯಾಯಾಲಯವು ವಾರೆಂಟ್ ಹೊರಡಿಸಿದ್ದು, ವಾರೆಂಟ್ ಜಾರಿ ಗೊಳಿಸುವ ಸಲುವಾಗಿ ಈತನ ವಿರುದ್ದ ಬ್ಯೂರೋ ಆಫ್ ಇಮಿಗ್ರೇಶನ್ ನವದೆಹಲಿ, ಭಾರತ ಸರಕಾರ ರವರಿಂದ ಎಲ್.ಓ.ಸಿ ತೆರೆಯಲಾಗಿದ್ದು ಈ ದಿನ ದಿನಾಂಕ: 08.10.2025 ರಂದು ಕತಾರ್ ನಿಂದ ಮಂಗಳೂರಿಗೆ ವಿಮಾನ ಮುಖೇನಾ ಬಂದಿದ್ದು, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಶನ್ ಅಧಿಕಾರಿಗಳು ವಶಕ್ಕೆ ಪಡೆದು ಉರ್ವಾ ಪೊಲೀಸ್ ಠಾಣಾ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದು, ಆತನನ್ನು ಕರೆತಂದು ಈ ದಿನ ದಿನಾಂಕ: 08.10.2025 ರಂದು ರಾತ್ರಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ವಾರಂಟ್ ಅಸಾಮಿಯು ನ್ಯಾಯಾಲಯದ ಕಲಾಪಗಳಿಗೆ ಹಾಜರಾಗದೆ ನ್ಯಾಯಾಲಯದ ಜಾಮೀನಿನ ಆದೇಶವನ್ನು ಉಲ್ಲಂಘನೆ ಮಾಡಿದ ಬಗ್ಗೆ ಉರ್ವಾ ಪೊಲೀಸ್ ಠಾಣಾ ಮೊಕದ್ದಮೆ ನಂಬ್ರ 100/2025 ಕಲಂ:269 ಬಿ.ಎನ್ ಎಸ್ ನಂತೆ ಪ್ರಕರಣವನ್ನು ದಾಖಸಲಾಗಿದೆ.


