Sunday, June 7, 2026
Homeಕರಾವಳಿರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ: ದಕ್ಷಿಣ ಕನ್ನಡ ಸೇರಿದಂತೆ 14 ಜಿಲ್ಲೆಗಳಲ್ಲಿ ಅಲರ್ಟ್‌...

ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ: ದಕ್ಷಿಣ ಕನ್ನಡ ಸೇರಿದಂತೆ 14 ಜಿಲ್ಲೆಗಳಲ್ಲಿ ಅಲರ್ಟ್‌ ಘೋಷಣೆ

- Advertisement -
- Advertisement -

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ ಎರಡು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ತುಮಕೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಅಕ್ಟೋಬರ್.‌14ರವರೆಗೂ ಮಳೆ ಮುಂದುವರಿಯಲಿದ್ದು, ಅಕ್ಟೋಬರ್.‌14ರ ಬಳಿಕ ಮಳೆ ಅಬ್ಬರ ಕೊಂಚ ಕಡಿಮೆಯಾಗಲಿದೆ. ಅಕ್ಟೋಬರ್.‌13ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಕೆಲವಡೆ ಭೂಕುಸಿತ ಸಂಭವಿಸುವ ಸಾಧ್ಯತೆಯಿದೆ. ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

- Advertisement -

Latest News

error: Content is protected !!