Sunday, August 30, 2026
Homeತಾಜಾ ಸುದ್ದಿಸಚಿವರಿಗೆ ಡಿನ್ನರ್ ಆಯೋಜಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸಚಿವರಿಗೆ ಡಿನ್ನರ್ ಆಯೋಜಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾತ್ರಿ ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಭೋಜನ ಕೂಟ ಏರ್ಪಡಿಸಿದ್ದರು.ಸಚಿವ ಸಂಪುಟ ಪುನಾರಚನೆ ಮತ್ತು ಎರಡೂವರೆ ವರ್ಷಗಳ ಬಳಿಕದ ಅಧಿಕಾರ ಹಂಚಿಕೆ ಕುರಿತಾದ ಚರ್ಚೆಗಳ ನಡುವೆಯೇ ಸಿದ್ದರಾಮಯ್ಯ ಸಚಿವರೊಂದಿಗೆ ಡಿನ್ನರ್ ಮೀಟಿಂಗ್ ನಡೆಸಿರುವುದು ಮಹತ್ವ ಪಡೆದಿದೆ.

ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಭೋಜನ ಕೂಟದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಬಹುಪಾಲು ಸಚಿವರು ಭಾಗಿಯಾಗಿದ್ದರು.

ಇನ್ನು ಸಚಿವರಾದ ಬಿ.ಝೆಡ್. ಜಮೀರ್ ಅಹ್ಮದ್ ಖಾನ್, ಎಸ್. ಎನ್. ಬೋಸರಾಜು, ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಮಂಕಾಳ ವೈದ್ಯ ಮತ್ತು ಎಸ್.ಎಸ್ ಮಲ್ಲಿಕಾರ್ಜುನ ಭೋಜನಕೂಟಕ್ಕೆ ಗೈರಾಗಿದ್ದರು.

- Advertisement -

Latest News

error: Content is protected !!