- Advertisement -
![]()
- Advertisement -
ಸುಳ್ಯ; ಮಾರಿಷಸ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕ ಜಲಪಾತದಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ನಾಲ್ಕೂರು ಗ್ರಾಮದ ಕಲ್ಲಾಜೆಯ ಜಯಲಕ್ಷ್ಮಿ ಭಟ್ ಅವರ ಪುತ್ರ ನಂದನ್ ಭಟ್ (26) ಮೃತ ಯುವಕ.
ನಂದನ್ ಎಸ್. ಭಟ್ ಅವರು ಮಾರಿಷಸ್ ನಲ್ಲಿ ವಿದ್ಯಾರ್ಥಿ ವೀಸಾದಲ್ಲಿದ್ದು ಅಲ್ಲಿ ಅಧ್ಯಯನ ನಡೆಸುತ್ತಿದ್ದರು. ನಿನ್ನೆ ಜಲಪಾತ ವೀಕ್ಷಣೆಗೆಂದು ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವರ ಮೃತದೇಹವನ್ನು ಅಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಇವರ ಮೃತದೇಹ ದನ್ನು ಊರಿಗೆ ತರುವ ನಿಟ್ಟಿನಲ್ಲಿ ಇಬ್ಬರು ಸಂಸದರು ಮುಧ್ಯ ಪ್ರವೇಶಿಸಿ ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
- Advertisement -


