Saturday, June 6, 2026
Homeತಾಜಾ ಸುದ್ದಿಆರ್‌ಎಸ್‌ಎಸ್ ಸಂಘಟನೆಯನ್ನು ನಿಷೇಧಿಸುವ ರಾಜ್ಯ ಸರ್ಕಾರದ ನಿರ್ಧಾರದಲ್ಲಿ ತಪ್ಪೇನಿಲ್ಲ; ಸಂಘಟನೆಯ ನಾಯಕರು ವಿವಿಧ ಸರ್ಕಾರಗಳನ್ನು ರಚಿಸುವಲ್ಲಿ...

ಆರ್‌ಎಸ್‌ಎಸ್ ಸಂಘಟನೆಯನ್ನು ನಿಷೇಧಿಸುವ ರಾಜ್ಯ ಸರ್ಕಾರದ ನಿರ್ಧಾರದಲ್ಲಿ ತಪ್ಪೇನಿಲ್ಲ; ಸಂಘಟನೆಯ ನಾಯಕರು ವಿವಿಧ ಸರ್ಕಾರಗಳನ್ನು ರಚಿಸುವಲ್ಲಿ ಮತ್ತು ಉರುಳಿಸುವಲ್ಲಿ ಭಾಗಿ; ದಿನೇಶ ಗುಂಡೂರಾವ್

- Advertisement -
- Advertisement -

ಬೆಳಗಾವಿ: ರಾಷ್ಟ್ರೀಯ ಸ್ವಯಂಸೇವಕ ಸಂಘ ಒಂದು ರಾಜಕೀಯ ಸಂಘಟನೆಯೇ ಹೊರತು, ಸಾಮಾಜಿಕ ಸಂಘಟನೆಯಲ್ಲ. ಈ ನಿಟ್ಟಿನಲ್ಲಿ ಅದನ್ನು ನಿಷೇಧಿಸುವ ರಾಜ್ಯ ಸರ್ಕಾರದ ನಿರ್ಧಾರ ಉತ್ತಮವಾಗಿದ್ದು, ಅದರಲ್ಲಿ ತಪ್ಪೇನಿಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು.

ಇನ್ನು ಸರ್ಕಾರಿ ನೌಕರರು ಆರ್‌ಎಸ್‌ಎಸ್ ನ ಯಾವುದೇ  ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದು. ಏಕೆಂದರೆ ಈ ಸಂಘಟನೆಯ ನಾಯಕರು ವಿವಿಧ ಸರ್ಕಾರಗಳನ್ನು ರಚಿಸುವಲ್ಲಿ ಮತ್ತು ಉರುಳಿಸುವಲ್ಲಿ ಭಾಗಿಯಾಗಿದ್ದಾರೆ. ಚುನಾವಣೆಯಲ್ಲೂ ಈ ಸಂಘಟನೆಯ ನಾಯಕರು ಸ್ಪರ್ಧಿಸುತ್ತಾರೆ. ಹಾಗಾಗಿ ಅದು ಸಾಮಾಜಿಕ ಸಂಘಟನೆಯಲ್ಲ ಎಂದು ದಿನೇಶ ಗುಂಡೂರಾವ್ ಹೇಳಿದರು.

- Advertisement -

Latest News

error: Content is protected !!