Monday, June 8, 2026
Homeತಾಜಾ ಸುದ್ದಿದೀಪಾವಳಿ ಹಬ್ಬಕ್ಕೆ ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆಎಸ್‌ಆರ್‌ಟಿಸಿ

ದೀಪಾವಳಿ ಹಬ್ಬಕ್ಕೆ ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆಎಸ್‌ಆರ್‌ಟಿಸಿ

- Advertisement -
- Advertisement -

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಕ್ಕೆ 2500 ಹೆಚ್ಚುವರಿ ಬಸ್‍ಗಳ ವ್ಯವಸ್ಥೆ ಕಲ್ಪಿಸಿದೆ.

ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿ ನಗರ ನಿಲ್ದಾಣದಿಂದ ಅ.17 ರಿಂದ 20 ರವರೆಗೆ ಬಸ್‍ಗಳು ಹೊರಡಲಿವೆ. ಜೊತೆಗೆ ರಾಜ್ಯ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಅ.22 ರಿಂದ 26 ರವರೆಗೆ ಬೆಂಗಳೂರಿಗೆ ವಿಶೇಷ ಬಸ್‍ಗಳು ಬರಲಿವೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲ್ಬುರ್ಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬದ್ ಮುಂತಾದ ರಸ್ತೆಗಳಿಗೆ ವಿಶೇಷಕ ಕಾರ್ಯಾಚರಣೆ ಮಾಡಲಿವೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದ್ದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‍ಗಳನ್ನು ಒಟ್ಟಿಗೆ ಕಾಯ್ದಿರಿಸಿದರೆ ವಾಪಸ್ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು.

ವಿಶೇಷ ಬಸ್‍ಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ವೆಬ್‍ಸೈಟ್‍ಗಳಲ್ಲಿ ಒದಗಿಸಲಾಗಿದೆ ಎಂದು ನಿಗಮವು ತಿಳಿಸಿದೆ.

- Advertisement -

Latest News

error: Content is protected !!