- Advertisement -
![]()
- Advertisement -
ಬೆಳ್ತಂಗಡಿ. ತಾಲೂಕಿನ ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಮಚ್ಚಿನ, ಕೊರಂಜ, ಶಾಲೆಗಳನ್ನು ಕೆಪಿಎಸ್ ( ಕರ್ನಾಟಕ ಪಬ್ಲಿಕ್ ಸ್ಕೂಲ್ )ಶಾಲೆಯಾಗಿ ಸರ್ಕಾರ ಮೇಲ್ದರ್ಜೆಗೇರಿಸಿ ಆದೇಶಿಸಿದೆ.
ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿಯನ್ನು ಸಲ್ಲಿಸಿದ್ದು ಈ ಮನವಿಗೆ . ಸಚಿವರು ಪೂರಕವಾಗಿ ಸ್ಪಂದಿಸಿ ತಾಲೂಕಿನ ಮಚ್ಚಿನ, ಕೊರಂಜ ಪ್ರಾಥಮಿಕ ಶಾಲೆಗಳು ಕೆಪಿಎಸ್ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆರಿಸಿ ಆದೇಶವನ್ನು ಮಾಡಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ.
- Advertisement -


