- Advertisement -
![]()
- Advertisement -
ಕಾಸರಗೋಡು: ದೀಪಾವಳಿ ಹಬ್ಬಕ್ಕಾಗಿ ಮನೆಯಲ್ಲಿ ವಿದ್ಯುದ್ದೀಪ ಅಳವಡಿಸುತ್ತಿದ್ದಾಗ ಶಾಕ್ ತಗುಲಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಾಸರಗೋಡಿನ ಸೀತಾಂಗೋಳಿ ಸಮೀಪದ ಪುತ್ತಿಗೆ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಪುತ್ತಿಗೆ ಆಚಾರಿಮೂಲೆ ನಿವಾಸಿ ರಾಜೇಶ್ ಆಚಾರ್ಯ ( 37) ಮೃತ ದುರ್ದೈವಿ.
ಬಡಗಿ ವೃತ್ತಿ ನಿರ್ವಹಿಸುತ್ತಿದ್ದ ಅವರು ದೀಪಾವಳಿಗಾಗಿ ಮನೆಯಂಗಳದಲ್ಲಿ ಅಲಂಕಾರ ವಿದ್ಯುದ್ದೀಪಗಳನ್ನು ಅಳವಡಿಸುತ್ತಿದ್ದಾಗ ತಗುಲಿದೆ. ಗಂಭೀರಾ ಸ್ಥಿತಿಯಲ್ಲಿದ್ದ ಅವರನ್ನು ಮನೆಯವರು ಕೂಡಲೇ ಆಸ್ಪತ್ರೆಗೆ ತಲಪಿಸಿದರೂ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ. ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -


