ಪುತ್ತೂರು : ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರು ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರು ಅ.20 ರಂದು ಮಾಡಿದ ಭಾಷಣ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ ಉಂಟುಮಾಡುವಂತಿದೆ. ಅವರು ಹಿಂದೂ-ಮುಸ್ಲಿಂ ಸಮುದಾಯಗಳ ಬಗ್ಗೆ ಅವಮಾನಕಾರಿ ಹೇಳಿಕೆಗಳನ್ನು ನೀಡಿ, ಮತದಾರರ ಸಂಖ್ಯೆಯ ಉಲ್ಲೇಖ ಮಾಡಿ ಧಾರ್ಮಿಕ ವೈಮನಸ್ಸು ಉಂಟುಮಾಡಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ ಭಾಷಣ ಖಾಸಗಿ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರಗೊಂಡಿದೆ ಎಂದು ದೂರುದಾರರಾದ ಪುತ್ತೂರು ತಾಲೂಕು ಈಶ್ವರಿ ಪದ್ಮುಂಜ ಎಂಬವರು ನೀಡಿದ ದೂರಿನ ಅನ್ವಯ ಅ.25 ರಂದು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅಪರಾಧ ಕ್ರಮಾಂಕ 118/2025, ಭಾರತೀಯ ನ್ಯಾಯ ಸಂಹಿತೆ (BNS) 79, 196, 299, 302 ಹಾಗೂ 3(5) ಕಲಂಗಳ ಅಡಿಯಲ್ಲಿ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


