Thursday, June 4, 2026
Homeಪ್ರಮುಖ-ಸುದ್ದಿನಾಳೆ ಆಂಧ್ರಪ್ರದೇಶಕ್ಕೆ ಅಪ್ಪಳಿಸಲಿರುವ ಮೊಂತಾ ಚಂಡಮಾರುತ

ನಾಳೆ ಆಂಧ್ರಪ್ರದೇಶಕ್ಕೆ ಅಪ್ಪಳಿಸಲಿರುವ ಮೊಂತಾ ಚಂಡಮಾರುತ

- Advertisement -
- Advertisement -

ವಿಶಾಖಪಟ್ಟಣ: ನಾಳೆ ಆಂಧ್ರಪ್ರದೇಶಕ್ಕೆ ಮೊಂತಾ ಚಂಡಮಾರುತ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ 23 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

110 ಕಿಲೋ ಮೀಟರ್ ವೇಗದಲ್ಲಿ ಚಂಡಮಾರುತ ಅಪ್ಪಳಿಸಲಿದೆ ಎಂದು ಮಾಹಿತಿ ನೀಡಲಾಗಿದ್ದು, ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

ಕಾಕಿನಾಡ ಬಳಿಯ ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ ಚಂಡಮಾರುತದಿಂದ ಹೆಚ್ಚಿನ ಹಾನಿ ಉಂಟಾಗುವ ಆತಂಕ ಎದುರಾಗಿದ್ದು, ಒಡಿಶಾ ಮತ್ತು ತಮಿಳುನಾಡು ರಾಜ್ಯಗಳಲ್ಲೂ ಮುನ್ನೆಚ್ಚರಿಕೆ ವಹಿಸಲಾಗಿದೆ.

ಆಂಧ್ರಪ್ರದೇಶ, ಒಡಿಶಾ ಮತ್ತು ತಮಿಳುನಾಡಿನ ಕಡಲ ತೀರ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಮುದ್ರಕ್ಕೆ ಇಳಿಯಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.

- Advertisement -

Latest News

error: Content is protected !!