Saturday, June 6, 2026
Homeತಾಜಾ ಸುದ್ದಿಚಾರ್ಮಾಡಿ ಘಾಟಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

- Advertisement -
- Advertisement -

ಮೂಡಿಗೆರೆ: ಮೂಡಬಿದಿರೆಯಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕಾರು, ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ನಡೆದಿದೆ.

ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರು ಚಾರ್ಮಾಡಿ ಘಾಟಿಯ ಅಣ್ಣಪ್ಪಸ್ವಾಮಿ ದೇಗುಲದ ಡೌನ್ ಹತ್ತಿರ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರು ರಸ್ತೆಯ ಮತ್ತೊಂದು ಬದಿಗೆ ಬಿದ್ದಿದ್ದು, ಅಲ್ಪ ಅಂತರದಷ್ಟರಲ್ಲಿ ದೊಡ್ಡ ಅನಾಹುತ ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನೆಯಲ್ಲಿ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ

- Advertisement -

Latest News

error: Content is protected !!